Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭೌತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪಡೆದ ಹಿರಿಯೂರು ತಾಲ್ಲೂಕಿನ ಬೇತೂರು ರಾಧಾಕೃಷ್ಣ ಬಿ.ಆರ್.

ಚಂದ್ರವಳ್ಳಿ ನ್ಯೂಸ್, ತುಮಕೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಬೇತೂರು ಗ್ರಾಮದ ರಾಧಾಕೃಷ್ಣ ಬಿ.ಆರ್. ಅವರು ತುಮಕೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಗಡಿ ಭಾಗದ ಬೇತೂರಿನ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಅವರು, ವಿ.ವಿ ಪುರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರೌಢ ಶಿಕ್ಷಣ, ತುಮಕೂರಿನ ವಾಸವಿ ವಿದ್ಯಾಸಂಸ್ಥೆಯಲ್ಲಿ ಪಿಯುಸಿ, ಸಿದ್ದಗಂಗಾ ಕಾಲೇಜಿನಲ್ಲಿ ಪದವಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್.ಸಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು.

Advertisement

ಡಿ.ರಂಗಸ್ವಾಮಿ ಹಾಗೂ ಕೆ. ಇಂದ್ರಮ್ಮ ದಂಪತಿಯ ಪುತ್ರರಾದ ಇವರು, ಪ್ರಸ್ತುತ ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದಾರೆ.

ರಾಧಾಕೃಷ್ಣ ಅವರು "ರೇರ್ ಅರ್ಥ್ ಆ್ಯಂಡ್ ಟ್ರಾನ್ಸಿಷನ್ ಮೆಟಲ್ ಐಯಾನ್ಸ್ ಡೋಪ್ಡ್ ಫಾಸ್ಫರ್ಸ್ ಫಾರ್ ಮಲ್ಟಿಫಂಕ್ಷನಲ್ ಅಪ್ಲಿಕೇಷನ್ಸ್" ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಈ ಪದವಿ ಲಭಿಸಿದೆ. ಇವರು ತುಮಕೂರು ವಿವಿಯ ಭೌತಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಕುಲಪತಿ ಪ್ರೊ. ಎಚ್. ನಾಗಭೂಷಣ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

ಸಂಶೋಧನೆಯ ವಿಶೇಷತೆಗಳು: ರೇರ್ ಅರ್ಥ್ ಹಾಗೂ ಟ್ರಾನ್ಸಿಷನ್ ಮೆಟಲ್ ಐಯಾನ್ಸ್ ಡೋಪ್ ಮಾಡಿದ ಫಾಸ್ಫರ್‌ಗಳ ತಯಾರಿಕೆ ಮತ್ತು ಅವುಗಳ ವಿವಿಧ ಗುಣಲಕ್ಷಣಗಳ ಕುರಿತು ಆಳವಾದ ಅಧ್ಯಯನ ನಡೆಸಲಾಗಿದೆ.

ವಿಶೇಷವಾಗಿ ಈ ಫಾಸ್ಫರ್‌ಗಳನ್ನು ಬಳಸಿ ಫಿಂಗರ್‌ಪ್ರಿಂಟ್ ಡಿಟೆಕ್ಷನ್ (ಬೆರಳಚ್ಚು ಪತ್ತೆ ಹಚ್ಚುವಿಕೆ), ಆ್ಯಂಟಿ-ಕೌಂಟರ್‌ಫೀಟಿಂಗ್ (ನಕಲಿ ನೋಟುಗಳ ತಡೆ), ಯು.ವಿ. ಬ್ಲಾಕಿಂಗ್ ಹಾಗೂ ಸೂಪರ್‌ಕೆಪಾಸಿಟರ್ಸ್ ಅಪ್ಲಿಕೇಷನ್‌ಗಳ ಕುರಿತು ನಾವೀನ್ಯತಾಪೂರ್ಣ ಸಂಶೋಧನೆ ಕೈಗೊಳ್ಳಲಾಗಿದೆ.

ರಾಧಾಕೃಷ್ಣ ಬಿ.ಆರ್ ಅವರು ತಮ್ಮ ಶೈಕ್ಷಣಿಕ ಹಾಗೂ ಸಂಶೋಧನಾ ಅವಧಿಯಲ್ಲಿ 100 ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರತಿಷ್ಠಿತ ವೈಜ್ಞಾನಿಕ ನಿಯತಕಾಲಿಕೆಗಳಲ್ಲಿ ಪ್ರಕಟಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಕಷ್ಟಪಟ್ಟು ಓದಿ ಇಂದು ಡಾಕ್ಟರೇಟ್ ಪದವಿ ಪಡೆದಿರುವುದು ಆ ಭಾಗದ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ