Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಚನಗಳ ಮೂಲಕವೇ ಸಾರ್ವಜನಿಕರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಮಡಿವಾಳ ಮಾಚಿದೇವ:ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸಮಾಜದಲ್ಲಿ ಬದಲಾವಣೆಯ ಪರ್ವವನ್ನು ಆರಂಭಿಸಿದ ಅನೇಕ ದಾರ್ಶನಿಕರು ತಮ್ಮದೇಯಾದ ವಚನಗಳ ಮೂಲಕ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಲು ಶ್ರಮಿಸಿದ್ಧಾರೆ. ವಿಶೇಷವಾಗಿ ಮಡಿವಾಳಮಾಚಿದೇವ ವಚನಗಳು ಸಾರ್ವಜನಿಕರಲ್ಲಿ ಪರಿವರ್ತನೆ ಉಂಟುಮಾಡಲು ಸಹಕಾರಿಯಾಗಿವೆ ಎಂದು ಶಾಸಕ
, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಸೋಮವಾರ ತಾಲ್ಲೂಕು ಪಂಚಾಯಿತಿ ಕಾರ್ಯಲಯದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಮಡಿವಾಳ ಸಮುದಾಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಡಿವಾಳಮಾಚಿದೇವ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮಡಿವಾಳಮಾಚಿದೇವರು ನಿರಂತರ ಕಾಯಕಯೋಗಿಯಾಗಿದ್ದರು, ಸದಾಕಾಲ ಧಾರ್ಮಿಕ ವಿಚಾರಧಾರೆಗಳನ್ನು ಎಲ್ಲರಿಗೂ ತಲುಪಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದವರು, ಇಂದು ಮಡಿವಾಳ ಸಮುದಾಯ ಜನರಲ್ಲಿ ಗುರುತಿಸಿಕೊಳ್ಳಲು ಮಡಿವಾಳ ಮಾಚಿದೇವರ ವಚನಗಳು ಸ್ಪೂರ್ತಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಶೀಲ್ಧಾರ್ ರೇಹಾನ್‌ಪಾಷ, ರಾಜ್ಯ ಸರ್ಕಾರ ಇಂತಹ ಮಹಾನೀಯರ ವಚನಗಳು ಸಮಾಜದ ಎಲ್ಲಾ ವರ್ಗಕ್ಕೂ ತಲುಪಿಸಬೇಕೆಂಬ ದೂರದೃಷ್ಟಿಯಿಂದ ಮಡಿವಾಳಮಾಚಿದೇವ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮೂಲಕ ನಡೆಸಲಾಗುತ್ತಿದೆ. ಧಾರ್ಮಿಕ ಪರಿತರ್ವನೆಯ ಹರಿಕಾರರಲ್ಲಿ ಮಡಿವಾಳಮಾಚಿದೇವರು ಒಬ್ಬರು ಎಂದರು.

ಮಡಿವಾಳ ಮಾಚಿದೇವರ ಬಗ್ಗೆ ಕೃಷಿ ಜಂಟಿ ನಿರ್ದೇಶಕ ಟಿ.ಮಂಜುನಾಥ ಉಪನ್ಯಾಸ ನೀಡಿದರು. ಸಂಜೀವಿನಿ ಲ್ಯಾಬ್‌ಟೆಕ್ನಿಷನ್ ಎಂ.ಎನ್.ಮೃತ್ಯುಂಜಯ ಮಾತನಾಡಿ, ಮಡಿವಾಳಸಮಾಜಕ್ಕೆ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಪ್ರಾತಿನಿಧ್ಯ ದೊರೆಯಬೇಕಿದೆ. ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕಿದೆ. ಮಡಿವಾಳ ಸಮಾಜಕ್ಕೆ ಎಸ್ಸಿ ಮೀಸಲಾತಿ ಕೊಡಿಸಲು ಶಾಸಕರು ಮುಂದಾಗಬೇಕೆಂದರು. 

ಜಿಲ್ಲಾಧ್ಯಕ್ಷ ರಾಮಜ್ಜ, ಗೌರವಾಧ್ಯಕ್ಷ ಎನ್.ಮಂಜುನಾಥ, ಅಧ್ಯಕ್ಷ ಎಂ.ನಾಗರಾಜು, ಕಾರ್ಯದರ್ಶಿ ಕುಶಾಲಪ್ಪ, ಖಜಾಂಚಿ ಆರ್ಟ್ಸ್‌ಸನ್‌ಪ್ರಕಾಶ್, ವಿಜಯಕುಮಾರ್, ಇಒ ಶಶಿಧರ, ಪೌರಾಯುಕ್ತ ಜಗರೆಡ್ಡಿ, ನಗರಸಭಾ ಸದಸ್ಯ ಬಿ.ಟಿ.ರಮೇಶ್‌ಗೌಡ, ಮುಖಂಡರಾದ ವೇದಮೂರ್ತಿ, ಜೀವನ್, ಓಂಕಾರಪ್ಪ, ಮಹಿಳಾಘಟಕದ ಅಧ್ಯಕ್ಷೆ ಶೈಲಜಾಮಂಜುನಾಥ, ಎನ್.ಮಂಜಳಾ ಮುಂತಾದವರು ಉಪಸ್ಥಿತರಿದ್ದರು.  

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ