Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಆರ್ಥಿಕ ಮುನ್ನಡೆಗೆ ತೋಟಗಾರಿಕೆ ಬೆಳೆಗಳು ಸೂಕ್ತ : ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯ ಸರ್ಕಾರ ಕೃಷಿ
, ತೋಟಗಾರಿಕೆ, ರೇಷ್ಮೆ ಇಲಾಖೆ ಹಾಗೂ ಹೈನುಗಾರಿಕೆಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳು ರೂಪಿಸಿ ರೈತರ ಅಭ್ಯುದಯಕ್ಕಾಗಿ ಉತ್ತೇಜನ ನೀಡುತ್ತಾ ಬಂದಿದೆ. ಕೃಷಿಯಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿ ಹೆಚ್ಚು ಆರ್ಥಿಕ ಲಾಭಪಡೆಯಲು ರೈತರಿಗೆ ಅನುಕೂಲಮಾಡಿಕೊಟ್ಟಂತೆ ತೋಟಗಾರಿಕೆ ಇಲಾಖೆಯಲ್ಲೂ ಸಹ ವಿವಿಧ ತೋಗಾರಿಕೆ ಬೆಳೆಗಳ ಬಗ್ಗೆ  ಹೆಚ್ಚು ಜಾಗೃತಿ ಮೂಡಿಸುತ್ತಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಶುಕ್ರವಾರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದ್ದ ತೋಟಗಾರಿಕೆ ಬೆಳೆಗಳು ಹಾಗೂ ಸಾವಯವ ಕೃಷಿಯ ಬಗ್ಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿಕಾರ್ಯಗಾರವನ್ನು ಗಿಡಕ್ಕೆ ನೀರುಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರೈತ ಸಮುದಾಯ ತಮಗೆ ಲಭ್ಯವಿರುವ ಜಮೀನಿನಲ್ಲಿ ಒಂದೇಹಂತದ ವಿವಿಧ ಬೆಳೆ ಬೆಳೆಯಲು ಎಲ್ಲಾ ರೀತಿಯ ಸಹಕಾರವಿದ್ದಲ್ಲಿ ತೋಟಗಾರಿಕೆ ಬೆಳೆ ಬೆಳೆದು ಲಾಭದತ್ತ ಮುನ್ನಡೆಯುವಂತೆ ಮನವಿ ಮಾಡಿದರು. ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ, ತೆಂಗು, ಬಾಳೆ, ಪಪ್ಪಾಯಿ, ಮಾವು ಮುಂತಾದ ಬೆಳೆಗಳು ರೈತರಿಗೆ ಹೆಚ್ಚು ಆರ್ಥಿಕ ಶಕ್ತಿ ತುಂಬುವವು ಎಂದರು.

ಸಾವಯವ ಕೃಷಿ ತಜ್ಞ ಯೋಗೇಶ್‌ಅಪ್ಪಾಜಯ್ಯ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಸಾವಯನ ಕೃಷಿಯೂ ವರದಾನವಾಗಿದೆ ಎಂಬುವುದನ್ನು ಅನೇಕ ರೈತರು ಈಗಾಗಲೇ ನಿರೂಫಿಸಿದ್ಧಾರೆ. ಈ ಹಿಂದೆ ರೈತ ಸಾವಯವ ಕೃಷಿ ಕ್ಷೇತ್ರದಿಂದ ದೂರವಿದ್ದು, ಇತ್ತೀಚಿನ ದಿನಗಳಲ್ಲಿ ಸಾವಯವ ಕೃಷಿ ಬಗ್ಗೆ ಹೆಚ್ಚು ಆಸಕ್ತಿ ವಹಿಸುತ್ತಿದ್ಧಾರೆ. ಸಾವಯವ ಕೃಷಿಯ ಪ್ರತಿಬೆಳೆಯೂ ಹೆಚ್ಚು ಲಾಭವನ್ನು ತಂದುಕೊಡುತ್ತವೆ. ಆದರೆ, ರೈತರು ಸಾವಯವ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಸೌಲಭ್ಯ ನಿರ್ಮಿಸಿಕೊಳ್ಳಬೇಕು ಎಂದರು.

ಕೃಷಿವಿಜ್ಞಾನಿ ಡಾ.ಓಂಕಾರಪ್ಪ ಮಾತನಾಡಿ, ಪ್ರತಿಯೊಬ್ಬ ಮನುಷ್ಯನು ನಾನಾಕಾರಣಗಳಿಂದ ನಿಶಕ್ತನಾಗತ್ತಾನೆ. ಯಾವುದೇ ಕೆಲಸ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಅದೇ ರೀತಿ ರೈತರು ತಮ್ಮ ಬೆಳೆಗಳನ್ನು ಸೂಕ್ತರೀತಿಯಲ್ಲಿ ಬೆಳೆಯಲು ವಿಫಲವಾದಾಗ ಮಾರುಕಟ್ಟೆ ಸಮಸ್ಯೆ ಉಂಟಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿ ತನ್ನ ಆರೋಗ್ಯದ ಬಗ್ಗೆ ಯಾವರೀತಿಯ ಗೌರವಕೊಡುತ್ತಾನೋ ಅದೇ ರೀತಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ವಹಿಸಬೇಕೆಂದರು.

ರೈತ ಮುಖಂಡರಾದ ಸೋಮಗುದ್ದುರಂಗಸ್ವಾಮಿ, ಕೆ.ಪಿ.ಭೂತಯ್ಯ, ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ತಿಪ್ಫೇಸ್ವಾಮಿ, ಕರಿಯಪ್ಪ ಮಾತನಾಡಿದರು. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಫೇಸ್ವಾಮಿ, ಕೆಪಿಸಿ ಸದಸ್ಯರಾದ ನೇತ್ರಾವತಿ, ಅಂಗಡಿರಮೇಶ್, ರೈತ ಮುಖಂಡರಾದ ತಿಪ್ಫೇಸ್ವಾಮಿ, ಶ್ರೀಕಂಠಮೂರ್ತಿ, ಹೆಗ್ಗೆರೆಆನಂದಪ್ಪ, ಆರ್.ಮಲ್ಲೇಶಪ್ಪ, ಕೃಷಿ ಸಹಾಯಕ ನಿರ್ದೇಶಕ ಜೆ.ಅಶೋಕ್, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ರೇಷ್ಮೆ ಅಧಿಕಾರಿ, ಉಮಾಪತಿ, ಪಶು ಅಧಿಕಾರಿ ಡಾ.ರೇವಣ್ಣ ಮುಂತಾದವರು ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ