Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತಗಳ್ಳತನದ ವಿರುದ್ಧ ಐದು ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮತಗಳ್ಳತನ ಕುರಿತ ಹೇಳಿಕೆಗೆ ಆಯೋಗವು ಚುನಾವಣಾ ನಿಯಮಗಳ ಅಡಿಯಲ್ಲಿ ಘೋಷಣೆಗೆ ಸಹಿ ಹಾಕಲಿ ಮತ್ತು ಮತದಾರರ ಪಟ್ಟಿಯಿಂದ ತಪ್ಪಾಗಿ ಸೇರಿಸಲಾದ ಅಥವಾ ತೆಗೆದುಹಾಕಲಾದ ಹೆಸರುಗಳನ್ನು ಸಲ್ಲಿಸಲಿ ಎಂದು ಚುನಾವಣಾ ಆಯೋಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸವಾಲು ಹಾಕಿದೆ ಎನ್ನಲಾಗಿದೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು ಈ ಬಗ್ಗೆ ಇಂದು ವಿಡಿಯೊ ಮೂಲಕ ವಿವರಣೆ ನೀಡಿದ್ದಾರೆ ಮತ್ತು ಬೆಂಗಳೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.

ಇದೀಗ ರಾಹುಲ್ ಗಾಂಧಿಯವರು ಮಾಡುತ್ತಿರುವ ಆರೋಪಗಳು, ಕೊಡುತ್ತಿರುವ ವಿವರಣೆಗಳ ಬಗ್ಗೆ ಸಹಿ ಮಾಡದಿದ್ದರೆ, ಅವರು ತಮ್ಮ ವಿಶ್ಲೇಷಣೆಯಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ ಎಂದರ್ಥ ಮತ್ತು ಇದರಿಂದ ಅವರು ಮಾಡುತ್ತಿರುವುದು ಅಸಂಬದ್ಧ ಆರೋಪ ಎಂಬ ತೀರ್ಮಾನಕ್ಕೆ ಬರಬೇಕಾಗುತ್ತದೆ ಎಂದು ಆಯೋಗ ಹೇಳಿದೆ.
ಒಂದು ವೇಳೆ ರಾಹುಲ್ ಗಾಂಧಿ ವಿಫಲವಾದರೆ ರಾಷ್ಟ್ರದ ಮುಂದೆ ಕ್ಷಮೆಯಾಚಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.


ರಾಹುಲ್ ಗಾಂಧಿಯವರು ನಿನ್ನೆ ಮೂರು ರಾಜ್ಯಗಳಲ್ಲಿ ಮತದಾರರ ಪಟ್ಟಿಯಿಂದ ತಪ್ಪಾಗಿ ಸೇರಿಸಲಾಗಿದೆ ಅಥವಾ ಹೊರಗಿಡಲಾಗಿದೆ ಎಂದು ಹೇಳಲಾದ ಮತದಾರರ ಹೆಸರುಗಳನ್ನು ಹಂಚಿಕೊಳ್ಳಲು ಮತ್ತು ಈ ವಿಷಯದಲ್ಲಿ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಚುನಾವಣಾ ಅಧಿಕಾರಿಗಳಿಗೆ ಸಹಿ ಮಾಡಿದ ಘೋಷಣೆಯೊಂದಿಗೆ ಹಂಚಿಕೊಳ್ಳಲು ಚುನಾವಣಾ ಆಧಿಕಾರಿಗಳು ಕೇಳಿಕೊಂಡಿದ್ದರು.

ರಾಹುಲ್ ಗಾಂಧಿಯವರು, ಕರ್ನಾಟಕದ ಒಂದು ಕ್ಷೇತ್ರದಲ್ಲಿ 1,00,250 ಮತಗಳ ಕಳ್ಳತನವಾಗಿದ್ದು, ಈ ಕ್ಷೇತ್ರದಲ್ಲಿ 11,965 ನಕಲಿ ಮತದಾರರು, ನಕಲಿ ಮತ್ತು ಅಮಾನ್ಯ ವಿಳಾಸಗಳನ್ನು ಹೊಂದಿರುವ 40,009 ಮತದಾರರು, 10,452 ಬಹು ಸಂಖ್ಯಾತ ಮತದಾರರು ಅಥವಾ ಏಕ ವಿಳಾಸ ಮತದಾರರು, ಅಮಾನ್ಯ ಫೋಟೋಗಳನ್ನು ಹೊಂದಿರುವ 4,132 ಮತದಾರರು, 33,692 ಮತದಾರರು ಹೊಸ ಮತದಾರರ ನಮೂನೆ 6 ನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ