Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದೇಶದಲ್ಲಿ ದೇಶವಿರೋಧಿ ಭಾಷಣ ಮಾಡುವ ರಾಹುಲ್ ಗಾಂಧಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶವಿರೋಧಿ ಚಿಂತನೆಗಳಿಂದಾಗಿ ಭಾರತೀಯ ಕಾಂಗ್ರೆಸ್ ಪಕ್ಷ ಈಗ ಜನಮಾನಸದಿಂದ ದೂರವಾಗುತ್ತಿದೆ. ವಿದೇಶದಲ್ಲಿ ದೇಶವಿರೋಧಿ ಭಾಷಣ ಮಾಡುವ ರಾಹುಲ್ ಗಾಂಧಿ ದೇಶದಲ್ಲಿ ಜಾಗೃತ ಮತದಾರರ ಎದುರು ಭಾಷಣ ಮಾಡಲು ಹಿಂದೆ - ಮುಂದೆ ನೋಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಬಿಹಾರದಲ್ಲಿ ಜೈ ಭೀಮ್ - ಜೈ ಸಂವಿಧಾನ್ ಹೆಸರಿನ ರ‍್ಯಾಲಿಗೆ ಜನವೇ ಇಲ್ಲದೆ ಖಾಲಿ‌ಕುರ್ಚಿಗೆ ಭಾಷಣ ಮಾಡುವ ಪರಿಸ್ಥಿತಿಯನ್ನು ಖರ್ಗೆ ಎದುರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ಅವರನ್ನು ಅವಮಾನಿಸುತ್ತಿದೆ ಎಂದು ಬಿಜೆಪಿ ದೂರಿದೆ.

ಧರ್ಮ, ಜಾತಿ, ಭಾಷೆ, ಪ್ರಾಂತ್ಯದ ಹೆಸರಿನಲ್ಲಿ ಒಡೆದು ಆಳುತ್ತಾ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಇದೀಗ ತನ್ನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ‌‌ಸಭೆಗೆ ಜನರನ್ನು ಸೇರಿಸಲು ಹೆಣಗಾಡುತ್ತಿದೆ. ಇಟಲಿ ಮಾತೆ ಹಾಗೂ ಸುಪುತ್ರನ ಸಭೆಗಾದರೆ ಹಣಕೊಟ್ಟು ಜನ ಸೇರಿಸುವ ಕಾಂಗ್ರೆಸ್ ಪದಾಧಿಕಾರಿಗಳು ನೆಪ ಮಾತ್ರಕ್ಕೆ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಸಭೆಗೆ ಅಂತಹ ಆಸಕ್ತಿಯನ್ನು ಸಹ ತೋರಿಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಜನ ಸೇರದ ಕಾರಣಕ್ಕೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರನ್ನು ಅಮಾನತುಗೊಳಿಸಿ ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯ ಮುಖ್ಯಸ್ಥರನ್ನು ಅಮಾನತುಗೊಳಿಸುವ ಸಂದರ್ಭ ಒದಗಿ ಬರಲಿದೆ. ಹಾಗಾಗಿ, ಗಾಂಧೀಜಿ ಅವರ ಆಶಯದಂತೆ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡುವುದೇ ಒಳಿತು ಎಂದು ಬಿಜೆಪಿ ತಾಕೀತು ಮಾಡಿದೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ