Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಅಧಿಕಾರಿಗಳ ದಾಳಿ: ಪರವಾನಗಿ ಇಲ್ಲದ ಕೀಟನಾಶಕ ವಶ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕೀಟನಾಶಕ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳ ದಾಳಿ ನಡೆಸಿ ಪರವಾನಗಿ ಇಲ್ಲದ
, ನೋಂದಾಯಿತವಲ್ಲದ ಕೀಟನಾಶಕವನ್ನು ವಶಪಡಿಸಿಕೊಂಡಿದ್ದಾರೆ.

ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮದ ಟಿ.ಬಿ. ಕ್ರಾಸ್ - ತುರುವೇಕೆರೆ ರಸ್ತೆಯಲ್ಲಿರುವ ಪಿ.ಎಂ. ಎಂಟರ್ ಪ್ರೈಸಸ್‌ಅಂಗಡಿಯಲ್ಲಿ ಕೀಟನಾಶಕ ಪರವಾನಗಿ ಇಲ್ಲದೆ, ನೋಂದಾಯಿತವಲ್ಲದ ಮತ್ತು ದಾಖಲಾತಿ ನಿರ್ವಹಣೆ ಇಲ್ಲದೆ ಅನಧಿಕೃತವಾಗಿ ಮಾರಾಟ ಮಾಡಲು ದಾಸ್ತಾನು ಮಾಡಲಾಗಿದೆ ಎಂಬ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕರಾದ ಪುಟ್ಟರಂಗಪ್ಪ ಹಾಗೂ ಅಶ್ವತ್ಥ್‌ನಾರಾಯಣ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಅನಧಿಕೃತವಾಗಿ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಕೀಟನಾಶಕವನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಸೊರವನಹಳ್ಳಿ ಗ್ರಾಮದಲ್ಲಿ 3100 ರೂ. ಮೌಲ್ಯದ ಸಾವಿರ ಪ್ಯಾಕೆಟ್‌ನ ಒಂದು ಬಾಕ್ಸ್ ಕೀಟನಾಶಕವನ್ನು ಅನಧಿಕೃತವಾಗಿ ಖರೀದಿಸಿ ವಿವಿಧ ಮಾರಾಟಗಾರರಿಗೆ ಮಾರಾಟ ಮಾಡಿರುವುದು ಸಹ ಈ ಹಿಂದಿನ ದಾಳಿ ವೇಳೆ ಪತ್ತೆಯಾಗಿತ್ತು ಎಂದು ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.
ದಾಳಿಯಲ್ಲಿ ಕೃಷಿ ಅಧಿಕಾರಿಗಳಾದ ಸೌಭಾಗ್ಯ ಹೆಚ್.ವಿ. ಪಾಲ್ಗೊಂಡಿದ್ದರು.  

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ