Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಅವಾಂತರ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ವಾಗ್ದಾಳಿ ​

Advertisement

 ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜಧಾನಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಾನ್ಯತಾ ಟೆಕ್ ಪಾರ್ಕ್ ಮತ್ತೆ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ
, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​"ಬಂದಾ ಪುಟ್ಟಾ, ಹೋದ ಪುಟ್ಟಾ" ಎಂಬಂತೆ ಸರ್ಕಾರದ ನಡೆ ಇದೆ ಎಂದು ವ್ಯಂಗ್ಯವಾಡಿರುವ ಅವರು, "ಶೋಕಿಲಾಲ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಮಾನ್ಯತಾ ಟೆಕ್‌ಪಾರ್ಕ್‌ನಲ್ಲಿ ನೀವು ಫೋಟೋ ಶೂಟ್‌ಮಾಡಿಸಿಕೊಂಡಿದ್ದಕ್ಕೆ ಒಂದು ವರ್ಷ ಕಳೆದಿದೆ. ಆದರೆ, ಪರಿಸ್ಥಿತಿ ಮಾತ್ರ ಇನ್ನೂ ಹಾಗೇ ಇದೆ," ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

​ಕಿಂಚಿತ್ತೂ ಸ್ಪಂದಿಸದ ಅಧಿಕಾರಿಗಳು: ನಿಖಿಲ್ ಆಕ್ರೋಶ-
​ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಲಿ ಅಥವಾ ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳಾಗಲಿ ನಾಗರಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಕಿಂಚಿತ್ತೂ ಮಾಡುತ್ತಿಲ್ಲ ಎಂಬುದು ಮಳೆ ಅವಾಂತರದಿಂದ ಮತ್ತೆ ಸಾಬೀತಾಗಿದೆ ಎಂದು ನಿಖಿಲ್ ದೂರಿದ್ದಾರೆ.

​"2025ರ ಮೇ ತಿಂಗಳಿನಲ್ಲೂ ಮಳೆಗೆ ಮಾನ್ಯತಾ ಟೆಕ್‌ಪಾರ್ಕ್‌ಕೆರೆಯಂತಾಗಿತ್ತು. ಈ ವರ್ಷವೂ (2026) ಅದೇ ಕಥೆ ಮುಂದುವರಿದಿದೆ. ಇದೇನಾ ನೀವು ಹೇಳುವ ಬ್ರ್ಯಾಂಡ್‌ಬೆಂಗಳೂರು?" ಎಂದು ಅವರು ಪ್ರಶ್ನಿಸಿದ್ದಾರೆ.

​ಮೂರು ವರ್ಷಗಳ ಸಾಧನೆ ಶೂನ್ಯ!
​ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರಿಸಿರುವ ಅವರು
, "ಬ್ರ್ಯಾಂಡ್‌ಬೆಂಗಳೂರು ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಕೊಳ್ಳೆ ಹೊಡೆದಿದ್ದೇ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಸಾಧನೆ. ರಾಜಧಾನಿಯ ಅಭಿವೃದ್ಧಿ ಮಾತ್ರ ಸಂಪೂರ್ಣ ಶೂನ್ಯವಾಗಿದೆ," ಎಂದು ಗಂಭೀರ ಆರೋಪ ಮಾಡಿದ್ದಾರೆ.

​ಹಿನ್ನೆಲೆಯಲ್ಲಿ, ಪ್ರತಿ ಬಾರಿ ಮಳೆಯಾದಾಗಲೂ ಐಟಿ ಹಬ್‌ಗಳು ಜಲಾವೃತಗೊಂಡು ಉದ್ಯೋಗಿಗಳು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ, ಸರ್ಕಾರ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂಬ ಸಾರ್ವಜನಿಕ ವಲಯದ ಆಕ್ರೋಶಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ಈ ಹೇಳಿಕೆ ಮತ್ತಷ್ಟು ಧ್ವನಿ ನೀಡಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನುಬಾಹಿರವಾಗಿ ಕಾರ್ಯದರ್ಶಿ ಮುಂದುವರಿಕೆ: ಹಿರಿಯೂರು TAPCMS ಆಡಳಿತ ಮಂಡಳಿಗೆ ಉಪ ನಿಬಂಧಕರ ಅಂತಿಮ ಎಚ್ಚರಿಕೆಹಿರಿಯೂರು ಉಪಚುನಾವಣೆ: “ಸ್ಥಳೀಯ ಸ್ವಾಭಿಮಾನ”ದ ಕೂಗು ಈಗ ಯಾಕೆ..?ಹಿರಿಯ ಪತ್ರಕರ್ತೆ ವಾಳ್ವೆಕರ್ ಚಿಕಿತ್ಸೆಗೆ 90 ಸಾವಿರ ಬಿಡುಗಡೆ ಮಾಡಿದ‌ ಸಿಎಂರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ತಮಿಳುನಾಡಿನಲ್ಲಿ ಬಿಜೆಪಿ ದಿನೇದಿನೇ ಬಲಿಷ್ಠವಾಗಿ ಬೆಳೆಯುತ್ತಿದೆ– ಆರ್. ಅಶೋಕ್ ವಿಶ್ವಾಸರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆಇಂಡೋ-ಡಚ್ ಅತ್ಯಾಧುನಿಕ ಹೈನುಗಾರಿಕೆ ತರಬೇತಿ ಕೇಂದ್ರ ಸ್ಥಾಪನೆ ​ ಜೆಡಿಎಸ್ ಪಕ್ಷದ ಹೋರಾಟಗಳು ಜನಪರವಾಗಿ ಇರುತ್ತವೆ-ನಿಖಿಲ್ಮಳೆ ಅವಾಂತರ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ವಾಗ್ದಾಳಿ ​ರೈತರನ್ನು ಒಕ್ಕಲೆಬ್ಬಿಸಬೇಡಿ: ಡಿ.ಕೆ.ಶಿ ಪಟಾಲಂ ವಿರುದ್ಧ ನಿಖಿಲ್ ಆಕ್ರೋಶ