Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟದಿಂದ ರಾಜಣ್ಣ ವಜಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಮಿತ್ರ ಕೆ.ಎನ್.ರಾಜಣ್ಣ ಇವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ.
ಮತಗಳ್ಳತನ ಆರೋಪದ ವಿರುದ್ಧ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಪದಚ್ಯುತಿಗೊಳಿಸಲಾಗಿದೆ.


ಕೆ‌.ಎನ್.ರಾಜಣ್ಣ ಇತ್ತೀಚೆಗೆ ತುಮಕೂರಿನಲ್ಲಿ ಮಾತನಾಡಿದ್ದು ಈಗ ಅವರ ಕುತ್ತು ತಂದಿದೆ. ವೋಟರ್ ಲಿಸ್ಟ್ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ?. ಮತಪಟ್ಟಿ ಅಕ್ರಮಗಳು ನಡೆದಿರುವುದು ಸತ್ಯ. ಆದರೆ, ಆ ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದಲ್ಲ. ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಕಾಂಗ್ರೆಸ್​ಗೆ ತೀವ್ರ ಮುಜುಗರ ಉಂಟಾಗಿದ್ದರಿಂದ ಹೈಕಮಾಂಡ್ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

ಸಚಿವ ಕೆ.ಎನ್.ರಾಜಣ್ಣ ಸಂಪುಟದಿಂದ ವಜಾಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ, ಪಿತೂರಿ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಸಚಿವ ಎಂದು ಕರೆಸಿಕೊಳ್ಳಲು ನನಗೆ ಸಂತೋಷ ಇದೆ. ಈ ಪಿತೂರಿ ಹಿಂದೆ ಯಾರು ಯಾರು ಇದ್ದಾರೆ?, ಏನೇನು ನಡೆದಿದೆ?. ಎಲ್ಲೆಲ್ಲಿ ನಡೆದಿದೆ?. ಎಲ್ಲೆಲ್ಲಿ ಯಾವ ಮುಖಂಡರ ಜೊತೆ ಏನೇನು ನಡೆದಿದೆ ಎಂಬ ಬಗ್ಗೆ ಎಲ್ಲವನ್ನೂ ಕಾಲ ಬಂದಾಗ ತಿಳಿಸುತ್ತೇನೆ' ಎಂದು ಹೇಳಿದರು.

ನಮ್ಮ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ನಮ್ಮ ಅಧ್ಯಕ್ಷರಿಗೆ ತಪ್ಪು ಗ್ರಹಿಕೆ ಆಗಿದೆ ಎಂಬುದು ನನ್ನ ಅನಿಸಿಕೆ‌. ಆ ತಪ್ಪು ಗ್ರಹಿಕೆ ನಿವಾರಣೆ ಮಾಡಲು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಹೋಗುತ್ತೇನೆ. ತಪ್ಪು ಗ್ರಹಿಕೆಯನ್ನು ನಿವಾರಣೆ ಮಾಡಲು ಪ್ರಯತ್ನ ಮಾಡುತ್ತೇನೆ. ನಾವು ಏನೇ ಮಾತನಾಡಿದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಿದ್ದೇವೆ.‌ ರಾಹುಲ್ ಗಾಂಧಿ ಅವರು ಈ ದೇಶದ ನಾಯಕರು. ಅವರು ಮಾಡಿದ ಮತಗಳ್ಳತನದ ಹೋರಾಟಕ್ಕೆ ನಮ್ನೆಲ್ಲರ ಬೆಂಬಲ ಇದೆ. ಅವರ ಮಾರ್ಗದರ್ಶನದಂತೆ ನಾವು ಮುಂದೆ ನಡೆದುಕೊಳ್ಳುತ್ತೇವೆ ಎಂದರು.

ನನ್ನನ್ನು ಸಚಿವನನ್ನಾಗಿ ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಧನ್ಯವಾದ ಅರ್ಪಿಸಿದ್ದೇನೆ.‌ ಸಚಿವ ಸತೀಶ್ ಜಾರಕಿಹೊಳಿ, ಚೆಲುವರಾಯಸ್ವಾಮಿ, ಸುಧಾಕರ್ ಎಲ್ಲರೂ ಹೋಗಿ ಸಿಎಂ ಅವರನ್ನು ಭೇಟಿಯಾಗಿದ್ದೇವೆ. ನನ್ನನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದು ಹೈಕಮಾಂಡ್ ಸೂಚನೆಯಾಗಿತ್ತು. ಅದರಂತೆ ಸಿಎಂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅದರಂತೆ ಸಂಪುಟದಿಂದ ನನ್ನನ್ನು ಕೈ ಬಿಡಲಾಗಿದೆ. ಇದು ಪಕ್ಷದ ತೀರ್ಮಾನವಾಗಿದೆ. ಅದನ್ನು ಈ ಸಂದರ್ಭದಲ್ಲಿ ಪ್ರಶ್ನೆ ಮಾಡುವುದು ಸಾಧುವಲ್ಲ ಎಂದು ತಿಳಿಸಿದರು.

ಪಕ್ಷಕ್ಕೆ ಮುಜುಗರ ಮಾಡಬಾರದು ಎಂಬ ದೃಷ್ಡಿಯಿಂದ ನಾನು ಹೆಚ್ಚಿನ ವಿವರಣೆ ಹೇಳಲು ಹೋಗುವುದಿಲ್ಲ. ರಾಹುಲ್ ಗಾಂಧಿ ಈ ದೇಶದ ನಾಯಕ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವೆ. ಮುಂದೆ ಎಲ್ಲವನ್ನೂ ಸರಿಯಾಗಿ ತಿಳಿಸುವೆ ಎಂದು ರಾಜಣ್ಣ ಅವರು ಪ್ರತಿಕ್ರಿಯಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ