Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಣ್ಣ ವಜಾ ಖಂಡಿಸಿ ಅರೆಬೆತ್ತಲೆ ಉರುಳು ಸೇವೆ ಮಾಡಿದ ಅಭಿಮಾನಿ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವುದನ್ನು ಖಂಡಿಸಿ ಜಿಲ್ಲೆಯ ಅಭಿಮಾನಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದಲ್ಲದೆ ಬೆಂಬಲಿಗನೊಬ್ಬ ಅರೆಬೆತ್ತಲೆ ಉರುಳು ಸೇವೆ ಮಾಡಿ ಗಮನ ಸೆಳೆದರು.


ಹೈಕಮಾಂಡ್ ಆದೇಶದ ಮೇರೆಗೆ ಕೆ.ಎನ್​ ರಾಜಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ವಜಾ ಮಾಡಿದ್ದಾರೆ. ಈ ಕುರಿತು ರಾಜಭವನವೂ ಆದೇಶ ಹೊರಡಿಸಿದೆ. ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.


ನಗರದ ಎಂಜಿ ರಸ್ತೆಯಲ್ಲಿ ಸೇರಿದ್ದ ಸಾವಿರಾರು ಜನರು ಬೃಹತ್​ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಮಾರ್ಗದಲ್ಲಿದ್ದ ಎಲ್ಲ ಅಂಗಡಿ - ಮುಗ್ಗಟ್ಟುಗಳು ಸ್ವಯಂಪ್ರೇರಿತವಾಗಿ ಬಾಗಿಲು ಹಾಕಿದ್ದವು. ಈ ಮೂಲಕ ವ್ಯಾಪಾರಿಗಳು ಪ್ರತಿಭಟನೆಗೆ ಪರೋಕ್ಷ ಬೆಂಬಲ ನೀಡಿದ್ದರು. ಪ್ರತಿಭಟನೆ ಹಿನ್ನೆಲೆ ಈ ಭಾಗದಲ್ಲಿ ಕೆಲಕಾಲ ಅಘೋಷಿತ ಬಂದ್ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅರೆಬೆತ್ತಲೆ ಉರುಳು ಸೇವೆ: ಮಾಜಿ ಸಚಿವ ರಾಜಣ್ಣ ಅವರ ಬೆಂಬಲಿಗನೊಬ್ಬ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿದರು. ರಾಜಣ್ಣ ಅವರ ಭಾವಚಿತ್ರ ಹಿಡಿದಿದ್ದ ಆತ, ರಾಜಣ್ಣ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಘೋಷಣೆ ಕೂಗುತ್ತಾ ಉರುಳು ಮಾಡಿದರು.

ಮಾಜಿ ಸಚಿವ ರಾಜಣ್ಣ ಬೆಂಬಲಿಗರು ಮಧುಗಿರಿ, ಕೊರಟಗೆರೆ, ತುಮಕೂರು, ಪಾವಗಡ ಸೇರಿದಂತೆ ಜಿಲ್ಲೆಯ 10 ತಾಲೂಕುಗಳಿಂದ ಆಗಮಿಸಿದ್ದರು. 60 ಬಸ್​​ಗಳಲ್ಲಿ ಆಗಮಿಸಿದ್ದ ರಾಜಣ್ಣ ಅವರ ಅಭಿಮಾನಿಗಳು ನಗರದ ಟೌನ್ ಹಾಲ್​ ಸರ್ಕಲ್​​ನಿಂದ ಬಿ.ಎಚ್. ರಸ್ತೆ, ಎಂಜಿ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಯ ಕಡೆಗೆ ಮೆರವಣಿಗೆ ನಡೆಸಿದರು.
ಸಾವಿರಾರು ಮಂದಿ ರಾಜಣ್ಣ ಅವರ ಭಾವ ಚಿತ್ರದ ಕಟೌಟ್
, ಪೋಸ್ಟರ್ ಹಿಡಿದು ಘೋಷಣೆ ಕೂಗುತ್ತಾ ಮಾಜಿ ಸಚಿವರಿಗೆ ಬೆಂಬಲ ಘೋಷಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ