Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಆರ್.ಎಲ್.ಜಾಲಪ್ಪ-ಕೆ.ಎಂ.ಕೃಷ್ಣ ಮೂರ್ತಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

 ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್‍ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

 ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ.

ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

ಪ್ರತಿಭಾ ಪುರಸ್ಕಾರ:
ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ