Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ರಾಮ್ ಪ್ರಥಮ ಸ್ಥಾನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ನಡೆದ ರಾಜ್ಯ ಮಟ್ಟದ
400 ಮೀಟರ್ ಓಟದ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಣಗಲಪುರ ಗ್ರಾಮದ ರಾಮ್, ಕೆ.ರಾಮಾಂಜಿನಪ್ಪ ಅವರು ಪ್ರಥಮ ಸ್ಥಾನ ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ ಬೆಂಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ಸೆಪ್ಟೆಂಬರ್ 25 ಮತ್ತು 26 ರಂದು  ರಾಜ್ಯ ಮಟ್ಟದ ಸ್ಪರ್ಧೆ ನಡೆಯಿತು.

ರಾಜ್ಯದ 35 ಜಿಲ್ಲೆಗಳಿಂದ 70 ಕ್ರೀಡಾಪಟುಗಳು ಭಾಗವಹಿಸಿದ ಕಠಿಣ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆ ಹೀರೆಹಳ್ಳಿಯನ್ನು ಪ್ರತಿನಿಧಿಸಿದ ರಾಮ್, ಒಂದು ನಿಮಿಷದೊಳಗೆ ಓಟ ಪೂರ್ಣಗೊಳಿಸಿ ದಾಖಲೆ ಬರೆದಿದ್ದಾರೆ. ಅವರ ಸಾಧನೆ ರಾಜ್ಯಕ್ಕೆ, ತುಮಕೂರು ಜಿಲ್ಲೆಗೆ ಮಾತ್ರವಲ್ಲದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರಕ್ಕೂ ಹೆಮ್ಮೆ ತಂದುಕೊಟ್ಟಿದೆ.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಗಿರೀಶ್ ಕೂಡ ತಮ್ಮ ಪ್ರತಿಭೆಯನ್ನು ತೋರಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸಂಘಟಕರು ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. 

ಗ್ರಾಮಸ್ಥರು ಹಾಗೂ ಶಾಲಾ ಶಿಕ್ಷಕರು ರಾಮ್ ಅವರ ಸಾಧನೆಯನ್ನು ಪ್ರಶಂಸಿಸಿ, ಈ ಗೆಲುವು ಗ್ರಾಮೀಣ ಪ್ರತಿಭೆಯನ್ನು ಅನಾವರಣ ಗೊಳಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ