Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮಲಿಂಗಾರೆಡ್ಡಿ ರಾಜೀನಾಮೆ, ಸಮಾಜ ಅತೀವ ನೋವು

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸಚಿವ ಸಂಪುಟದಲ್ಲಿ ಸಚಿವ ರಾಮಲಿಂಗಾರೆಡ್ಡಿರವರು ಕೇಳಿದ ಖಾತೆ ನೀಡಲಿಲ್ಲವೆಂದು ಬೇಸತ್ತು ರಾಜೀನಾಮೆ ನೀಡಿರುವುದು ನಮಗೆಲ್ಲಾ ಮನಸ್ಸಿಗೆ ಅತೀವ ನೋವುಂಟಾಗಿದೆ ಎಂದು ಮಂಜುನಾಥರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲಿನಿಂದಲೂ ಪಕ್ಷಕ್ಕೆ ನಿಷ್ಟಾವಂತರಾಗಿರುವ ಹಿರಿಯ ಅನುಭವಿ ರಾಜಕಾರಣಿ ರಾಮಲಿಂಗಾರೆಡ್ಡಿರವರು ಸಿದ್ದರಾಮಯ್ಯನವರ ಅಧಿಕಾರವಧಿಯಲ್ಲಿ ಸಾರಿಗೆ ಸಚಿವರಾಗಿದ್ದರು. ಈಗ ಬೆಂಗಳೂರು ನಗರಾಭಿವೃದ್ದಿ ಕೇಳಿದ್ದರು. ಅದಕ್ಕೆ ಬದಲಾಗಿ ಜಲಸಂಪನ್ಮೂಲ ಖಾತೆ ನೀಡಿರುವುದು ಅವರಿಗೆ ಸಮಾಧಾನವಾಗಿಲ್ಲ. ಅದಕ್ಕಾಗಿ ರಾಜಿನಾಮೆ ಕೊಟ್ಟಿದ್ದಾರೆ. ಹೈಕಮಾಂಡ್ ಇದನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು.

ವಿಜಯಕುಮಾರ್‌ರೆಡ್ಡಿ ಮಾತನಾಡಿ ಸಚಿವ ರಾಮಲಿಂಗಾರೆಡ್ಡಿರವರು ಹಿಂದಿನಿಂದಲೂ ಕಾಂಗ್ರೆಸ್‌ನಲ್ಲಿಯೇ ಉಳಿದುಕೊಂಡಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಇವರಿಗೆ ಯಾವುದೆ ಕಪ್ಪು ಚುಕ್ಕೆ ಕಳಂಕವಿಲ್ಲ.

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ದೆಹಲಿಗೆ ಹೋಗಿ ನಾಯಕರುಗಳ ಬಳಿ ಲಾಭಿ ಮಾಡಿದವರಲ್ಲ. ನಗರಾಭಿವೃದ್ದಿ ಖಾತೆ ಸಿಗಲಿಲ್ಲವೆಂದು ಬೇಜಾರಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ವರಿಷ್ಟರು ಮತ್ತೊಮ್ಮೆ ಪರಾಮರ್ಶಿಸಲಿ ಎಂದು ಮನವಿ ಮಾಡಿದರು. ಪುರುಷೋತ್ತಮ, ವೆಂಕಟೇಶ್‌ರೆಡ್ಡಿ, ರಾಜಣ್ಣ, ನಾಗರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!