Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಸಿಬಿ ತಂಡದ ವಿಜಯೋತ್ಸವ, ಜೂನ್-13 ರಂದು ವಿಚಾರಣೆ-ಸಾಕ್ಷ್ಯ ನೀಡಲು ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2025 ರ ಜೂನ್ 4 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಅಭಿನಂದನಾ ಸಮಾರಂಭದ ದಿನದಂದು ನಡೆದ ಅಹಿತಕರ ಘಟನೆಗಳು ಹಾಗೂ ಸಾವು - ನೋವುಗಳ ಬಗ್ಗೆ ಉಂಟಾಗಿರುವ ಲೋಪಗಳ ಕುರಿತು ಸಮಗ್ರವಾಗಿ ವಿಚಾರಣೆ ನಡೆಸಲು ಬೆಂಗಳೂರು ನಗರ ಜಿಲ್ಲೆಯ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ ಜಿ. ಅವರನ್ನು ಸರ್ಕಾರವು ನೇಮಿಸಿದೆ.

ಈ ಸಂಬಂಧ 2025 ರ ಜೂನ್ 13 ರಂದು ಪೂರ್ವಾಹ್ನ 11.00 ಗಂಟೆಯಿಂದ ಅಪರಾಹ್ನ 1.30 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ ರಸ್ತೆ, ಬೆಂಗಳೂರು -560009 ಇಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು,

ಅಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾರೇ ಆಗಲಿ ನನ್ನ ಸಮಕ್ಷಮ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ