Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಕ್ಷಾತ್ಕಾರವೇ ಮನುಷ್ಯ ಜೀವನದ ನಿಜವಾದ ಗುರಿ:ಮಾತಾಜೀ ತ್ಯಾಗಮಯೀ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀರಾಮಕೃಷ್ಣ ಪರಮಹಂಸರು ತಿಳಿಸಿದಂತೆ ಭಗವಂತನ ಸಾಕ್ಷಾತ್ಕಾರ ಮನುಷ್ಯ ಜೀವನದ ನಿಜವಾದ ಗುರಿಯಾಗಬೇಕು
,ಇದನ್ನು ಕಾಮ-ಕಾಂಚನಗಳ ತ್ಯಾಗದ  ಮೂಲಕ ಸಾಧಿಸಬಹುದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷೆ ಮಾತಾಜೀ ತ್ಯಾಗಮಯೀ ಅಭಿಪ್ರಾಯಪಟ್ಟರು.

                             ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಶ್ರೀರಾಮಕೃಷ್ಣ ಪರಮಹಂಸರ 191ನೇ ಜಯಂತ್ಯುತ್ಸವದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಶ್ರೀರಾಮಕೃಷ್ಣರ ಜೀವನ ಮತ್ತು ಸಂದೇಶಗಳ ಬಗ್ಗೆ ವಿಶೇಷ ಪ್ರವಚನ ನೀಡಿದರು.


ಅವತಾರ ವರಿಷ್ಠರಾಗಿ ಸರ್ವಧರ್ಮಗಳ ಸಾಧನೆಗಳನ್ನು ಮಾಡಿದ ಶ್ರೀರಾಮಕೃಷ್ಣರ ಜೀವನ ಆಧ್ಯಾತ್ಮಿಕ ಅನುಭವಗಳ ಬಹುದೊಡ್ಡ ಪ್ರಯೋಗ ಶಾಲೆ, ಶ್ರೀರಾಮಕೃಷ್ಣರ ನಾಲ್ಕು ಪ್ರಧಾನ ಮಹಾವಾಕ್ಯಗಳನ್ನು ಪಾಲಿಸಬೇಕು. ಸಾಧು-ಸಂತರ ಸತ್ಸಂಗ ಮಾಡಬೇಕು, ಸದಾ ಭಗವಂತನ ಚಿಂತನೆ ಮಾಡಬೇಕು ಎಂದು ತಿಳಿಸಿದರು.


ಜಯಂತೋತ್ಸವದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಾದ ಎಂ ಗೀತಾ ನಾಗರಾಜ್ ಮತ್ತು ಯತೀಶ್ ಎಂ ಸಿದ್ದಾಪುರ ಅವರ ನೇತೃತ್ವದಲ್ಲಿ ವಿಶೇಷ ಶ್ರೀರಾಮಕೃಷ್ಣ ಭಜನೆ,108 ಶ್ರೀರಾಮಕೃಷ್ಣರ ನಾಮಸ್ಮರಣೆ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಅನ್ನಪ್ರಸಾದ ವಿನಿಯೋಗ ನಡೆಯಿತು. 

                        ಕಾರ್ಯಕ್ರಮದಲ್ಲಿ ನೇತಾಜಿ ಪ್ರಸನ್ನ, ಎಚ್ ಲಕ್ಷ್ಮೀದೇವಮ್ಮ,ನಾಗಶಯನಾ ಗೌತಮ್, ಪಂಕಜ, ಸೌಮ್ಯ, ನಾಗರಾಜ್, ಗೀತಾ ವೆಂಕಟೇಶರೆಡ್ಡಿ, ರಾಘವೇಂದ್ರ, ರಶ್ಮಿ, ಪಿ.ಎಸ್.ಮಾಣಿಕ್ಯ, ದೊಡ್ಡಜ್ಜಯ್ಯ, ಮಲ್ಲಿಕಾರ್ಜುನ, ಕವಿತಾ, ಮಾನ್ಯ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸದ್ಭಕ್ತರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ