Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ: ಶೋಭಾ ಕರಂದ್ಲಾಜೆ

Advertisement
51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ: ಶೋಭಾ ಕರಂದ್ಲಾಜೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗ ಮೇಳದಲ್ಲಿ ಆಯ್ಕೆಯಾದ
51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ ತಿಳಿಸಿದರು.

ಭಾರತೀಯ ಅಂಚೆ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ಸಹಭಾಗಿತ್ವದೊಂದಿಗೆ ಎನ್‍ಜಿಓ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮೇಳ ನೇಮಕಾತಿ ಅಭಿಯಾನದ  ರಾಷ್ಟ್ರೀಯ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ 17ನೇ ಉದ್ಯೋಗ ಮೇಳವು ದೇಶದ 40 ಕಡೆಗಳಲ್ಲಿ ಏಕ ಕಾಲದಲ್ಲಿ ನಡೆಯುತ್ತಿದೆ ಎಂದರು.


ನಮ್ಮ ರಾಜ್ಯದಲ್ಲಿ ಈ ಮೇಳವು ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದು, ಇಂದು ಬೆಂಗಳೂರಿನಲ್ಲಿ 120 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗಿದೆ. ಹೊಸದಾಗಿ ನೇಮಕವಾದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಇಲಾಖೆ, ರೈಲ್ವೆ ಇಲಾಖೆ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳು, ವಿವಿಧ ಸಂಸ್ಥೆಗಳ ಹುದ್ದೆಗಳಿಗೆ ನೇಮಕಗೊಂಡಿದ್ದಾರೆ ಎಂದರು.


ಭಾರತದ ಯುವಕರು ತಂತ್ರಜ್ಞಾನ, ಶಿಕ್ಷಣ, ಕೌಶಲ್ಯ, ರಕ್ಷಣೆ, ಕೌಶಲ್ಯಾಭಿವೃದ್ಧಿ ಮುಂತಾದ  ಹಲವಾರು ಕ್ಷೇತ್ರಗಳಲ್ಲಿ ತಮ್ಮ ಸಾಮಥ್ರ್ಯವನ್ನು ಜಗತ್ತಿಗೆ ತೋರಿಸಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಯುವಕರ ಪಾತ್ರವನ್ನು ಗುರುತಿಸಿ ಪ್ರಧಾನಮಂತ್ರಿಗಳು ಅಕ್ಟೋಬರ್ 2022 ರಂದು ರೋಜ್‍ಗಾರ್ ಮೇಳವನ್ನು ಪ್ರಾರಂಭಿಸಿದರು. ಈ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ಮೂಲಕ ಯುವಕರ ಸಬಲೀಕರಣ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಭಾಗವಹಿಸುವ ಅವಕಾಶವನ್ನು ಒದಗಿಸಲಿದೆ ಎಂದರು.

ಹೊಸದಾಗಿ ನೇಮಕವಾಗಿರುವ ಅಭ್ಯರ್ಥಿಗಳಿಗೆ ಪೋಷಕರು ಕಷ್ಟಪಟ್ಟು ವಿದ್ಯಾಭ್ಯಾಸ ಕೊಡಿಸಿದ್ದಾರೆ. ಪೋಷಕರ ಶ್ರಮದ ಜೊತೆ ನೀವು ಶಿಕ್ಷಣ ಪಡೆದು, ಇಂದು ಉದ್ಯೋಗ ಪಡೆದಿದ್ದೀರಿ. ನಮ್ಮ ದೇಶದ ಸಲುವಾಗಿ ಕೆಲಸ ಮಾಡಬೇಕು. ನಿಮಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ನೇಮಕಾತಿ ಪಡೆದ ಅಭ್ಯರ್ಥಿಗಳಿಗೆ ಶುಭಾಷಯ ಕೋರಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಮುಖ್ಯ ಅಂಚೆ ಇಲಾಖೆ ನಿರ್ದೇಶಕ ಸಂದೇಶ ಮಹದೇವಪ್ಪ, ರೈಲ್ವೆ ಇಲಾಖೆಯ ಅಧಿಕಾರಿ ಉಮಾ ಶರ್ಮಾ, ಗೃಹ ಮಂತ್ರಾಲಯದ ಕಮಾಂಡೆಂಟ್ ಅನಿಲ್ ಕುಮಾರ್ ಮೀನಾ, ಅಂಚೆ ಇಲಾಖೆಯ ಅಧಿಕಾರಿಗಳು, ಹೊಸದಾಗಿ ನೇಮಕಾತಿ ಪಡೆದ ಅಭ್ಯರ್ಥಿಗಳು ಉಪಸ್ಥಿತರಿದ್ದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ