Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರೈಲ್ವೆಯ 60 ಸಾವಿರ ಹುದ್ದೆಗಳ ನೇಮಕಾತಿ- ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ : ವಿ ಸೋಮಣ್ಣ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಕರ್ನಾಟಕ ರಾಜ್ಯದ ಜನತೆಗೆ ಅನುಕೂಲವಾಗುವಂತೆ  ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ  ವಿ ಸೋಮಣ್ಣ ಅವರು ತಿಳಿಸಿದರು.

ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕøತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕøತಿಕ ರಾಜಧಾನಿ. ಪ್ರಧಾನ ಮಂತ್ರಿ ಜನ-ಧನ್ ಯೋಜನೆಯಡಿ ಸೌಲಭ್ಯ, ಜನರ ಆರೋಗ್ಯಕ್ಕಾಗಿ ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ ಇದರ ಸವಾರ್ಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು.

ದೇಶಕ್ಕೆ ತನ್ನದೇ ಅದ ಪರಂಪರೆ ಮತ್ತು ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಕಳೆದ 10 ವರ್ಷಗಳಲ್ಲಿ ಪ್ರಧಾನ ಮಂತ್ರಿಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ.

ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಭಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌