Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್‍ಸಿಸಿ ಬೆಟಾಲಿಯನ್‍ಗೆ ಮಾಜಿ ಸೈನಿಕರ ನೇಮಕ : ಅರ್ಜಿ ಆಹ್ವಾನ

Advertisement


ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. (National cadet corps) ನಿರ್ದೇಶನಾಲಯವು ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ರಾಯಚೂರು, ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.


     ಮಾಜಿ ಸೈನಿಕರನ್ನು ಎನ್ಸಿಸಿ ಬೆಟಾಲಿಯನ್ಗಳಿಗೆ ಹೆಚ್ಚುವರಿ ಸಿಬ್ಬಂದಿಗಳಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಭೂ ಸೇನೆಯಿಂದ ಆಕ್ಟೋಬರ್ 2022 ನಂತರ ನಿವೃತ್ತರಾಗಿರುವ ಜೆ.ಸಿ. (ಸುಬೇದಾರ್ ಮತ್ತು ನಾಯಬ್ ಸುಬೇದರ್) ಹಾಗೂ ಹವಾಲ್ದಾರ್ ರ್ಯಾಂಕ್ (ಎಮ್ಎಸಿಪಿ ಹವಾಲ್ದಾರ್ಗಳನ್ನು ಪರಿಗಣಿಸುವುದಿಲ್ಲ) ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 
ಸೈನ್ಯದಲ್ಲಿ ದುರ್ನಡತೆ ಮತ್ತು ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.  ಆಸಕ್ತ ಮಾಜಿ ಸೈನಿಕರು 13 ಮಾರ್ಚ್ 2025 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.


ಹೆಚ್ಚಿನ ಮಾಹಿತಿಗಾಗಿ ಇಮೇಲ್ : : [email protected] ಸಂಪರ್ಕಿಸಬಹುದು.  ಅರ್ಜಿ ಸಲ್ಲಿಸಲು   https://nis.bisag-n.gov.in/nis/downloads-public ಜಾಲತಾಣವನ್ನು ಬಳಸಬೇಕು.    ನಿರ್ದೇಶನಾಲಯ (ಕರ್ನಾಟಕ ಮತ್ತು ಗೋವಾ) ಕೆಎಸ್ಸಿಎಮ್ಎಫ್ ಬಿಲ್ಡಿಂಗ್, 4ನೇ ಮಹಡಿ ನಂ-8 ಕನ್ನಿಂಗ್ಹ್ಯಾಮ್ ರಸ್ತೆ, ಬೆಂಗಳೂರು-560001 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ