ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ 2026ರ ಜೂನ್ 23ರಂದು ಬೆಳಿಗ್ಗೆ 11:00 ಗಂಟೆಗೆ ನಗರದ ಫಿಲ್ಟರ್ ಹೌಸ್ ಹಿಂಭಾಗ ಇರುವ ವಿಭಾಗೀಯ ಅಂಚೆ ಕಚೇರಿ, ಮೊದಲನೇ ಮಹಡಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. ಆಯ್ಕೆಯಾದ ಅಂಚೆ ಜೀವ ವಿಮೆ ಪ್ರತಿನಿಧಿಗಳು ರೂ.5,000 ಮೊತ್ತವನ್ನು ಉಳಿತಾಯ ಪತ್ರದ ರೂಪದಲ್ಲಿ ಜಮಾ ಮಾಡಲು ಸಿದ್ಧರಿರಬೇಕು. ನಿರುದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ಇತರ ವಿಮಾ ಕಂಪನಿಗಳ ಮಾಜಿ ಪ್ರತಿನಿಧಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನಿವೃತ್ತ ಶಿಕ್ಷಕರು ಹಾಗೂ ಆಸಕ್ತಿಯುಳ್ಳ ಯಾವುದೇ ಅರ್ಹ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ ಪಿ. ಮೊಹಮ್ಮದ್ ಶಫಾಯತ್ ಉಲ್ಲಾ ಶರೀಫ್ ಅವರ ಮೊಬೈಲ್ ಸಂಖ್ಯೆ 9449849279 ಸಂಪರ್ಕಿಸಬಹುದು.



