Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತ್ಯಾಗ, ಹೋರಾಟ, ಸೇವಾ ತತ್ಪರತೆ ಸ್ಮರಿಸಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಹಿಂದಿನ ತಲೆಮಾರುಗಳ ತ್ಯಾಗ
, ಹೋರಾಟ, ಸೇವಾ ತತ್ಪರತೆ ಸ್ಮರಿಸಿ ಅವರ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ ಎಂದು ವಿಶ್ರಾಂತ ಜಂಟಿ ನಿರ್ದೇಶಕ ಪ್ರೊ.ಟಿ.ವಿ.ಸುರೇಶ್‌ಗುಪ್ತ ಹೇಳಿದರು.

ಆರ್ಯವೈಶ್ಯ ಸಂಘ, ಆರ್ಯವೈಶ್ಯ ಸಾಹಿತ್ಯ ಪರಿಷತ್ತು, ವಾಸವಿ ಮಹಿಳಾ ಸಂಘದಿಂದ ಚಿತ್ರದುರ್ಗದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ವಾಸವಿ ಜಯಂತಿ ಸಪ್ತೋತ್ಸವದ ಮೂರನೆ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾತಿನಿಧಿಕವಾಗಿ ಹತ್ತು ಮಂದಿ ವಣಿಜಕುಲದ ಮಹನೀಯರನ್ನು ಚಿತ್ರ ಸಮೇತ ಕಿರುಪರಿಚಯ ಹಾಡಿನೊಂದಿಗೆ ಪ್ರಸ್ತುತ ಪಡಿಸಲಾಗಿದೆ. ನಮ್ಮ ಸಮುದಾಯದಲ್ಲಿ ಸಾಹಿತಿಗಳು, ಸ್ವಾತಂತ್ರ ಹೋರಾಟಗಾರರು ಮಹಾದಾನಿಗಳು ಹಾಗೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವವರನ್ನು ಸ್ಮರಿಸಿಕೊಳ್ಳಬೇಕಿದೆ ಎಂದರು.

ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಸರ್ವದಾ ಸುರೇಶ್ ಗುಪ್ತ ಮಾತನಾಡಿ ಜನಪ್ರಿಯವಾದ ಹರಟೆ ಕಾರ್ಯಕ್ರಮದಂತೆ ಈ ದಿನ ಹಬ್ಬಗಳು ಅಂದು ಇಂದು ವಿಷಯ ಕುರಿತು ಏರ್ಪಡಿಸಲಾಗಿದ್ದ ಸಂವಾದ ಗೋಷ್ಠಿಯಲ್ಲಿ ಆರು ಗೃಹಲಕ್ಷ್ಮಿಯರು ಮಂಡಿಸಿದ ವಿಚಾರದಲ್ಲಿ ಜೆ.ಆರ್.ಶಿವಕುಮಾರ್ ರಚಿತವಾದ ಏಕತಾಗೀತೆಗೆ ನಮ್ಮ ಗಾಯಕಿಯರು ಧ್ವನಿಗೂಡಿಸಿದ್ದು, ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರ್ಯವೈಶ್ಯ ಸಂಘದ ಅಧ್ಯಕ್ಷ ಶ್ರೀನಿವಾಸಬಾಬು ಉದ್ಘಾಟಿಸಿದರು. ಎಂ.ಎಚ್.ಮಂಜುನಾಥ್, ಎನ್.ಶಶಿಧರಗುಪ್ತ ಇವರುಗಳು ವೇದಿಕೆಯಲ್ಲಿದ್ದರು.

ಮಹಿಳೆಯರಿಂದ ಕೋಲಾಟ, ಹಳೆ ಚಿತ್ರಗೀತೆಗಳ ಜಾಮಿಂಗ್ ಅನೇಕ ಹೃನ್ಮನ ಸೆಳೆಯಿತು.
ಸ್ವರ್ಣರಾಜ್ ಪ್ರಾರ್ಥಿಸಿದರು. ಸುಧಾ ಮಂಜುನಾಥ್ ಸ್ವಾಗತಿಸಿದರು. ಜೆ.ಆರ್.ಶಿವಕುಮಾರ್ ವಂದಿಸಿದರು. ದೇವಿಗೆ ಮಂಗಳಾರತಿ ನಂತರ ಪ್ರಸಾದ ವಿನಿಯೋಗಿಸಲಾಯಿತು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!