Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು: ಸರ್ಕಾರದ ವಿರುದ್ಧ ಹತ್ತು ಪ್ರಶ್ನೆಗಳ ಬಾಣ ಬಿಟ್ಟ ಜೆಡಿಎಸ್

ಚಂದ್ರವಳ್ಳಿ ನ್ಯೂಸ್, ​​ಬೆಂಗಳೂರು: 
ಸಿಲಿಕಾನ್ ಸಿಟಿಯಲ್ಲಿ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೈಗೊಂಡಿರುವ
'ಸುರಕ್ಷಿತ ಪಾದಚಾರಿ ಮಾರ್ಗ'  ಅಭಿಯಾನದ ವಿರುದ್ಧ ಈಗ ವಿರೋಧ ಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ. ಪಾದಚಾರಿಗಳ ಹಿತರಕ್ಷಣೆಯ ಸರ್ಕಾರದ ಕಳಕಳಿಯನ್ನು ಒಪ್ಪುತ್ತಲೇ, ಬಡ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸರ್ಕಾರದ "ದ್ವಂದ್ವ ಮತ್ತು ಎಡಬಿಡಂಗಿ ಧೋರಣೆ"ಯನ್ನು ಕಟುವಾಗಿ ಟೀಕಿಸಲಾಗಿದೆ.

​ಫುಟ್‌ಪಾತ್ ತೆರವು ಕಾರ್ಯಾಚರಣೆ ಹೆಸರಿನಲ್ಲಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿರುವುದನ್ನು ಪ್ರಶ್ನಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹತ್ತು ಪ್ರಮುಖ ಪ್ರಶ್ನೆಗಳ ಬಾಣವನ್ನು ಬಿಡಲಾಗಿದೆ.

Advertisement

​ಬಡವರ ಹೊಟ್ಟೆಮೇಲೆ ಗದಾಪ್ರಹಾರ: ಪ್ರಮುಖ ಪ್ರಶ್ನೆಗಳು
​ತೋರಿಕೆಯ ಬಡವರ ಕಾಳಜಿ: ದಿನದ ಆದಾಯ ನಂಬಿ ಬದುಕುವ ಲಕ್ಷಾಂತರ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಬಡವರ ಕಾಳಜಿ ಕೇವಲ ತೋರಿಕೆ ಎಂಬುದನ್ನು ಸಾಬೀತುಪಡಿಸುತ್ತಿಲ್ಲವೇ
?

​ಪುನರ್ವಸತಿ ಎಲ್ಲಿ?: ವ್ಯಾಪಾರಿಗಳನ್ನು ತೆರವುಗೊಳಿಸುವ ಮುನ್ನ ಅವರಿಗೆ ಸೂಕ್ತ ಪುನರ್ವಸತಿ ಅಥವಾ ಪರ್ಯಾಯ ವ್ಯವಸ್ಥೆಯನ್ನು ಸರ್ಕಾರ ಏಕೆ ಕಲ್ಪಿಸಿಲ್ಲ?

​ಅಧಿಕಾರಿಗಳಿಗೆ ಶಿಕ್ಷೆ ಏನು?: ಇಷ್ಟು ದಿನಗಳ ಕಾಲ ಫುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡಲು ಬಿಟ್ಟು, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದ್ದ ಅಧಿಕಾರಿಗಳ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ?

​ಮಾರುಕಟ್ಟೆಗಳ ಕೊರತೆ: ಇಡೀ ಬೆಂಗಳೂರಿನಲ್ಲಿ ತರಕಾರಿ ವ್ಯಾಪಾರ ರಸ್ತೆ ಬದಿಯಲ್ಲೇ ನಡೆಯುತ್ತಿದೆ. ಇವರಿಗಾಗಿ ಸುಸಜ್ಜಿತ ತರಕಾರಿ ಮಾರುಕಟ್ಟೆಗಳನ್ನು ನಿರ್ಮಿಸುವುದು ಸರ್ಕಾರದ ಕರ್ತವ್ಯ ಅಲ್ಲವೇ?

​ಆರ್ಥಿಕತೆಗೆ ಪೆಟ್ಟು: ದೇಶದ ಆರ್ಥಿಕತೆಗೆ ಶೇ. ೫೦ ರಷ್ಟು ಕೊಡುಗೆ ನೀಡುವ ಸಣ್ಣ ಮತ್ತು ಅತಿಸಣ್ಣ ವ್ಯಾಪಾರಿಗಳ ಮೇಲೆ ಇಂತಹ ಕ್ರಮ ಕೈಗೊಂಡರೆ, ಈಗಾಗಲೇ ಹದಗೆಟ್ಟಿರುವ ರಾಜ್ಯದ ಆರ್ಥಿಕತೆ ಮತ್ತಷ್ಟು ಪಾತಾಳಕ್ಕೆ ಕುಸಿಯುವುದಿಲ್ಲವೇ?

​ಬಲಾಢ್ಯರ ಒತ್ತುವರಿಗೇಕೆ ವಿನಾಯಿತಿ?: ಬಡವರ ಮೇಲೆ ಪ್ರತಾಪ ತೋರುವ ಸರ್ಕಾರ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಬಲಾಢ್ಯರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಮಳೆಗಾಲದಲ್ಲಿ ಬೆಂಗಳೂರು ಮುಳುಗಲು ಉಳ್ಳವರ ಒತ್ತುವರಿಯೇ ಕಾರಣವಲ್ಲವೇ?

​ಕೇವಲ ಪಬ್ಲಿಸಿಟಿ ಸ್ಟಂಟ್?: ಫುಟ್‌ಪಾತ್ ತೆರವು ಕಾರ್ಯಾಚರಣೆಯ ಹೆಸರಿನಲ್ಲಿ ಸರ್ಕಾರಕ್ಕೆ ಕೇವಲ ಉಚಿತ ಪ್ರಚಾರ (ಮುನ್ನೆಲೆ ಸುದ್ದಿ) ಸಿಗಬಹುದೇ ವಿನಃ, ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲು ಸಾಧ್ಯವೇ?

​"ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಫುಟ್‌ಪಾತ್ ತೆರವು ಮಾಡಲೇಬೇಕು, ಅದಕ್ಕೆ ನಮ್ಮ ಸಹಮತವಿದೆ. ಆದರೆ, ಸ್ವಚ್ಛ ಬೆಂಗಳೂರಿನ ಹೆಸರಿನಲ್ಲಿ ದಿನದ ದುಡಿಮೆಯನ್ನೇ ನಂಬಿರುವ ಬಡ ಕುಟುಂಬಗಳ ಅನ್ನದ ದಾರಿಯನ್ನು ಬಂದ್ ಮಾಡುವುದು ಎಷ್ಟು ಸರಿ? ಬಡವರ ಬದುಕು ನಲುಗಲು ಬಿಡಲು ಸಾಧ್ಯವಿಲ್ಲ." ವಿರೋಧ ಪಕ್ಷದ ನಾಯಕರ ಆಕ್ರೋಶ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ