Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಚಾರ್ಯರ ಬೋಧನೆಗಳೇ ನಮಗೆ ದಾರಿದೀಪ-ಡಿಕೆ ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಶ್ರೀ ಜಗದ್ಗುರು ರೇಣುಕಾಚಾರ್ಯರ ಬೋಧನೆಗಳೇ ನಮಗೆ ದಾರಿದೀಪ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿ ಅವರು ಮಾತನಾಡಿದರು.

ಇದೇ ವೇಳೆ ಬಾಳೆಹೊನ್ನೂರು ಧರ್ಮಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿ ಮಹಾರಥೋತ್ಸವದ ಅಂಗವಾಗಿ, ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಸ್ಥಳದಲ್ಲಿ ನಿರ್ಮಿಸಿರುವ 51 ಅಡಿ ಎತ್ತರದ, ಶ್ರೀ ಜಗದ್ಗುರು ರೇಣುಕಾಚಾರ್ಯರ ಮಂಗಲ ಮೂರ್ತಿ ಪ್ರತಿಷ್ಠಾಪನೆಯ ಭೂಮಿ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ರಂಭಾಪುರಿ ಪೀಠ ನಿರ್ಮಿಸಿರುವ ಮೇಲ್ಪಾರ್ ರಸ್ತೆಯ ಉದ್ಘಾಟನೆ ಸಮಾರಂಭದಲ್ಲಿ ‌ಶ್ರೀ ಶ್ರೀ ಶ್ರೀ ಜಗದ್ಗುರು ಪ್ರಸನ್ನರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳೊಂದಿಗೆ ಭಾಗವಹಿಸಿ ಮಾತನಾಡಿದರು.

ಇಂತಹ ಪುಣ್ಯಭೂಮಿಯಲ್ಲಿ ನಿಂತುಕೊಂಡು ಶ್ರೀ ರೇಣುಕಾಚಾರ್ಯರ ಮಂಗಲಮೂರ್ತಿ ಶಿಲಾನ್ಯಾಸ ಭೂಮಿ ಪೂಜೆಯಲ್ಲಿ ಭಾಗವಹಿಸುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಭಾಗ್ಯವಾಗಿದೆ. ‌ಶ್ರೀ ಶ್ರೀ ಶ್ರೀ ಜಗದ್ಗುರು ಪ್ರಸನ್ನರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ನನ್ನ ಕೋಟಿ ಪ್ರಣಾಮಗಳು. ಅದೇ ರೀತಿ ನನ್ನ ಗುರುಗಳಾದ ವೀರ ಗಂಗಾಧರ ಅಜ್ಜಯ್ಯನ ಪಾದಗಳಿಗೂ ನನ್ನ ನಮಸ್ಕಾರಗಳು.

ಶ್ರೀ ವೀರ ಗಂಗಾಧರ ಅಜ್ಜಯ್ಯನವರು ಈ ಪೀಠದ ಅಧ್ಯಕ್ಷರಾಗಿದ್ದರು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಅವರು ಸಂದೇಶವನ್ನು ಕೊಟ್ಟಿದ್ದರು. ನಮ್ಮ ಮನೆಗಳನ್ನು ಯಾವ ರೀತಿ ಕಾಪಾಡುತ್ತೇವೆಯೋ ಹಾಗೆಯೇ ನಮ್ಮ ಮಠಗಳನ್ನು ನಾವು ಕಾಪಾಡಬೇಕು ಎಂದು ಡಿಸಿಎಂ ಶಿವಕುಮಾರ್ ಅಭಿಪ್ರಾಯಪಟ್ಟರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ