Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್- ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ಆರಂಭ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಹುಚರ್ಚಿತ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನ್ಯಾಯಾಂಗ ವಿಚಾರಣೆಯು ಮಹತ್ವದ ಘಟ್ಟ ತಲುಪಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್ ಎಸ್. ರಾವ್ ಅವರು ಮಾಫಿ ಸಾಕ್ಷಿಯಾಗಿ (ಅಪ್ರೂವರ್) ತಮ್ಮ ಸ್ಫೋಟಕ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ದಾಖಲಿಸುವ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.

ಬಿಗಿ ಭದ್ರತೆಯಲ್ಲಿ ಕೋರ್ಟ್‌ಗೆ ಹಾಜರು:
ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಪ್ರದೋಷ್ ಅವರನ್ನು ಇಂದು ಅತ್ಯಂತ ಬಿಗಿ ಭದ್ರತೆಯ ನಡುವೆ ಹಾಜರುಪಡಿಸಲಾಯಿತು. ಈ ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ನ್ಯಾಯಾಲಯದ ಸುತ್ತಲೂ ಭಾರೀ ಬಂದೋಬಸ್ತ್ ಏರ್ಪಡಿಸಿದ್ದರು.

Advertisement

 

ಇನ್ ಕ್ಯಾಮರಾ ಪ್ರೊಸಿಡಿಂಗ್ಸ್ (ಮುಚ್ಚಿದ ಕೋಣೆಯ ವಿಚಾರಣೆ):
ಪ್ರಕರಣದ ಸಂವೇದನಾಶೀಲತೆಯನ್ನು ಪರಿಗಣಿಸಿ ನ್ಯಾಯಾಧೀಶರು 'ಇನ್ ಕ್ಯಾಮರಾ ಪ್ರೊಸಿಡಿಂಗ್ಸ್' ನಡೆಸಲು ಆದೇಶಿಸಿದರು. ಈ ಹಿನ್ನೆಲೆಯಲ್ಲಿ, ಕಲಾಪಕ್ಕೆ ಸಂಬಂಧಿಸಿದ ಅಧಿಕೃತ ವಕೀಲರನ್ನು ಹೊರತುಪಡಿಸಿ ಉಳಿದ ಎಲ್ಲರೂ ಕೋರ್ಟ್ ಹಾಲ್‌ನಿಂದ ಹೊರಹೋಗುವಂತೆ ನ್ಯಾಯಾಧೀಶರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಹಾಜರು: ಮತ್ತೊಂದಡೆ, ಈ ಪ್ರಕರಣದ ಪ್ರಮುಖ ಆರೋಪಿಗಳಾದ ಕನ್ನಡ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಕಲಾಪಕ್ಕೆ ಹಾಜರುಪಡಿಸಲಾಯಿತು.

ಮುಂದಿನ ಕಾನೂನು ಪ್ರಕ್ರಿಯೆ ಏನು?:
ಹತ್ಯೆ ನಡೆದ ದಿನದ ವಾಸ್ತವ ಸಂಗತಿಗಳು ಮತ್ತು ಸತ್ಯಾಸತ್ಯತೆಗಳನ್ನು ಪ್ರದೋಷ್ ಈಗಾಗಲೇ ತನಿಖಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ನೀಡಿದ್ದಾರೆ.

ಈಗ ವಿಶೇಷ ಸರ್ಕಾರಿ ಅಭಿಯೋಜಕರು ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿ, ಆತನ ಬಳಿಯಿರುವ ಪ್ರತಿಯೊಂದು ಮಹತ್ವದ ಮಾಹಿತಿ ಮತ್ತು ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ದಾಖಲೆಗೆ ಸೇರಿಸಲಿದ್ದಾರೆ.

ಇದರ ಬೆನ್ನಲ್ಲೇ, ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಪರ ವಕೀಲರು ಪ್ರದೋಷ್ ಅವರನ್ನು ಕ್ರಾಸ್ ಎಕ್ಸಾಮಿನೇಷನ್ ಅಂದರೆ ಪಾಟಿ ಸವಾಲಿಗೆ ಒಳಪಡಿಸಲಿದ್ದಾರೆ.

ಪ್ರದೋಷ್ ಅವರ ಈ ಮಾಫಿ ಸಾಕ್ಷ್ಯದ ಹೇಳಿಕೆಯು ಮುಂಬರುವ ದಿನಗಳಲ್ಲಿ ಪ್ರಕರಣದ ದಿಕ್ಕನ್ನೇ ಬದಲಿಸುವ ಸಾಧ್ಯತೆಯಿದ್ದು, ಕಾನೂನು ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ