Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯರ ಜ್ಞಾನ ಭಂಡಾರ, ಅನುಭವ ಪಡೆದು ಜೀವನ ಸಾಗಿಸಿ- ಎಡಿಸಿ ಸೈಯಿದಾ ಆಯಿಷಾ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಿರಿಯರ ಜ್ಞಾನ ಭಂಡಾರ
, ಅನುಭವ  ಅಪಾರವಾಗಿದ್ದು ಯುವ ಪೀಳಿಗೆಯು ಹಿರಿಯರ ಮಾರ್ಗದರ್ಶನದಲ್ಲಿ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ  ಸಯಿದಾ ಆಯಿಷಾ  ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಜೀವನದಲ್ಲಿ ಹಿರಿಯ ನಾಗರೀಕರ ಸ್ಥಾನ ಅತ್ಯಂತ ವಿಶೇಷವಾದದ್ದು. ಹಿರಿಯ ನಾಗರೀಕರು ಕುಟುಂಬದ ಬೇರುಗಳು ಇದ್ದ ಹಾಗೆ. ಬೇರು ಗಟ್ಟಿಯಾಗಿದ್ದರೆ ಮರ ಬೆಳೆಯುತ್ತದೆ.  ಹಿರಿಯರ ಆಶೀರ್ವಾದ ಅನುಭವ ಮಾರ್ಗದರ್ಶನದಿಂದ  ಸುಂದರವಾದ ಬದುಕನ್ನು ಕಟ್ಟಿಕೊಳ್ಳಬಹುದು ಎಂದರು.

Advertisement

ಕುಟುಂಬ, ಸಮಾಜ, ದೇಶದ ಅಭಿವೃದ್ಧಿಗೆ ಹಿರಿಯ ನಾಗರೀಕರು ನೀಡಿದ ಕೊಡುಗೆ ಅಪಾರ. ಜೀವನದಲ್ಲಿ ಕಷ್ಟ, ಯಶಸ್ಸು ಅನುಭವದಿಂದ ಬರುತ್ತದೆ. ಹಿರಿಯರಿಗೆ ಅನುಭವ ಹೆಚ್ಚಾಗಿರುತ್ತದೆ.

ಮಕ್ಕಳಿಗೆ ಹಿರಿಯರು ಕಥೆಗಳನ್ನು ಮನರಂಜನೆಗಾಗಿ ಮಾತ್ರ ಹೇಳುತ್ತಿರಲಿಲ್ಲ. ಕಥೆಯ ಮೂಲಕ ಪ್ರೀತಿ, ಸಹನೆ, ಶಿಸ್ತು, ಮಾನವೀಯ ಮೌಲ್ಯವನ್ನು ತಿಳಿಸುತ್ತಿದ್ದರು.

ಈಗಿನ ಕಾಲದಲ್ಲಿ ಮಕ್ಕಳು  ಮೊಬೈಲ್, ಲ್ಯಾಬ್ ಟ್ಯಾಪ್ , ತಂತ್ರಜ್ಞಾನದ ಬಳಕೆ ಹೆಚ್ಚಾಗಿ ಮಾಡುತ್ತಾರೆ. ಅವರು ಹಿರಿಯರಿಗೆ ಸಮಯವನ್ನು ನೀಡುತ್ತಿಲ್ಲ. ಕಿರಿಯರು ಹಿರಿಯರಿಗೆ ಸಮಯವನ್ನು ನೀಡಿ ಪ್ರೀತಿಯಿಂದ ಮಾತನಾಡಿಸಿ ಗೌರವದಿಂದ ನೋಡಿಕೊಳ್ಳಬೇಕು. ಅವರ ಆರೋಗ್ಯದ ಕಡೆ ಕಾಳಜಿ ವಹಿಸಿ ಹಿರಿಯರನ್ನು ಕುಟುಂಬದ ಪ್ರಮುಖ ಸದಸ್ಯರನ್ನಾಗಿ ನೋಡಬೇಕಾದುದು ಕರ್ತವ್ಯವೆಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಲಹೆಗಾರ ಕೃಷ್ಣ ಪ್ರಸಾದ್ ಮಾತನಾಡಿ ಹಿರಿಯ ನಾಗರೀಕರಿಗೆ ಕಾನೂನು ಸೇವೆಗಳು, ವೃದ್ದಾಪ್ಯ ಪಿಂಚಣಿ ಸೌಲಭ್ಯ, ಪ್ರಯಾಣದಲ್ಲಿ ರಿಯಾಯಿತಿ, ಗುರುತಿನ ಚೀಟಿ, ಉಚಿತ ಲಾಯರ್, ಸಹಾಯವಾಣಿ ಸೌಲಭ್ಯದ ಕುರಿತು ಹಿರಿಯ ನಾಗರೀಕರಿಗೆ ಅರಿವು ಮೂಡಿಸಿದರು.

ಹಿರಿಯ ನಾಗರೀಕರಿಗೆ ಸಮಸ್ಯೆಗಳಿದ್ದಲ್ಲಿ   ಸಹಾಯವಾಣಿ ಸಂಖ್ಯೆ 08022222919ಯನ್ನು ಸಂಪರ್ಕಿಸಬಹುದು. ಉಚಿತ ಕಾನೂನಿನ ಅರಿವು, ವೈಯಕ್ತಿಕ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಲಹೆಗಾರ ಕೃಷ್ಣ ಪ್ರಸಾದ್ ಅವರ ದೂರವಾಣಿ ಸಂಖ್ಯೆ 8861317519 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರೀಕರಿಗೆ ಸನ್ಮಾನಿಸಲಾಯಿತು. ಕೃತಕ ಕಾಲು 3 ಜನರಿಗೆ ವಿತರಣೆ ಮಾಡಲಾಯಿತು. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಹಿರಿಯ ನಾಗರೀಕರಿಗೆ ಪಶಸ್ತಿ ಪತ್ರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ಎಂ, ಜಿಲ್ಲಾ ನಿರೂಪಣಾಧಿಕಾರಿ ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಅನಿತಾ ಲಕ್ಷ್ಮಿ, ಜಿಲ್ಲಾ ಪಂಚಾಯತ್  ಸಹಾಯಕ ಕಾರ್ಯದರ್ಶಿ ಮಂಜುನಾಥ ಜಿ.ಆರ್. ಜಿಲ್ಲಾ ವಿಶೇಷಚೇತನರ ಕಲ್ಯಾಣಧಿಕಾರಿ ಅರುಣ್ ಕುಮಾರ್ ಎಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿಂಗಾರವ್ವ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ಪ್ರಭಾಕರ್, , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿವಿದ್ದೋಶ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಹಿರಿಯ ನಾಗರೀಕರು ಉಪಸ್ಥಿತರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ