ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ಕಾಮಗಾರಿಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿ, ಜಿಲ್ಲೆಯಾದ್ಯಂತ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸಮಿತಿಯ ಜಿಲ್ಲಾಧ್ಯಕ್ಷ ಬಿ.ಎಸ್. ಮಂಜಣ್ಣ ಹಾಗೂ ಪದಾಧಿಕಾರಿಗಳು ಶುಕ್ರವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಸಮರ್ಪಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.




