Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಮರಿಗೆ ಮೀಸಲಾತಿ ಬಿಜೆಪಿ ಕಿಡಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು
 ಮರು ಸ್ಥಾಪಿಸಲು ಹೊರಟಂತಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಾಪ್ರಹಾರ ಮಾಡಿದರು.

ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ ಎಂದು ಅಧ್ಯಕ್ಷರು ಹರಿಹಾಯ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ, ಚುನಾವಣೆಯಲ್ಲಿ ಗೆದ್ದು ಬರುವಾಗ 'ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್ದ ಕಾಂಗ್ರೆಸ್ಸಿಗರು ನಮ್ಮದೇನಿದ್ದರೂ ಮುಸ್ಲಿಂ ಸಮುದಾಯದ ಉತ್ತೇಜನದ ಆಡಳಿತಎನ್ನುವುದನ್ನೀಗ ಪ್ರತಿಬಿಂಬಿಸುತ್ತಿದ್ದಾರೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಆಡಳಿತ ನಡೆಸಿರುವ ಬಿದೆಪಿ ಪಕ್ಷದ ಸರ್ಕಾರ ಎಂದೂ ಇಂತಹ ತಾರತಮ್ಯಕ್ಕೆ ಅವಕಾಶ ಕೊಡಲಿಲ್ಲ, ಕರ್ನಾಟಕದಲ್ಲಿ ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲಿನಆಡಳಿತ ನೀಡಿದೆ. ಕೇಂದ್ರದ ಹೆಮ್ಮೆಯ ನರೇಂದ್ರ ಮೋದಿ ಅವರ ಸರ್ಕಾರ ಇಂದಿಗೂ ಕೂಡ ವರ್ಗ ಬೇಧಕ್ಕೆ ಅವಕಾಶ ನೀಡದಂತೆ ಎಲ್ಲರನ್ನೂ ಒಳಗೊಂಡ ಯೋಜನೆಗಳನ್ನು ರೂಪಿಸಿದೆ, ಜಾರಿಗೊಳಿಸುತ್ತಿದೆ, ಆದರೆ ಕರ್ನಾಟಕದಲ್ಲಿ ಏಕೆ ಹೀಗೆ ?ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂದು ಸಂಪುಟ ತೆಗೆದುಕೊಂಡಿರುವ ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಯ ಹೆಚ್ಚಳವನ್ನು ತೀವ್ರವಾಗಿ ಬಿಜೆಪಿ ಖಂಡಿಸುತ್ತದ್ದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ನಿರಂತರ ವೈಫಲ್ಯಗಳು, ಮೇಲಿಂದ ಮೇಲೆ ಹೊರ ಬರುತ್ತಿರುವ ಹಗರಣಗಳು, ಭ್ರಷ್ಟಾಚಾರಗಳು ಹಾಗೂ ಹೊಣೆಗೇಡಿತನದ ಆಡಳಿತದ ಪರಿಣಾಮ ಕ್ರಿಕೆಟ್ ಕಾಲ್ತುಳಿತದಲ್ಲಿ ಜನರು ಸಾವು,ನೋವು ಅನುಭವಿಸಿದ ರಾಜ್ಯ ಕಂಡ ಬಹುದೊಡ್ಡ ದುರಂತದ ಪ್ರಕರಣದಿಂದ ಜನರ ದೃಷ್ಟಿ ಬೇರೆಡೆ ಸೆಳೆಯಲು ಇಂತಹ ನಿರ್ಧಾರಗಳನ್ನು ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿದೆ. ಇದನ್ನು ಸಹಿಸಿಕೊಂಡು ಕೂರುವ ಪ್ರಶ್ನೆಯೇ ಇಲ್ಲ, ಭಾರತೀಯ ಜನತಾ ಪಾರ್ಟಿಯು ಜನಾಕ್ರೋಶವನ್ನು ಬೆಂಬಲಿಸಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ