ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಡಿಎ ಹಾಗೂ ಜಿಬಿಎ ಬೆಂಗಳೂರಿನ ಮುಖವಾಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿರುವ ಬೆಂಗಳೂರಿಗೆ ನಿಮ್ಮ ಶಿಸ್ತು ಹಾಗೂ ಪ್ರಾಮಾಣಿಕತೆ ಅಗತ್ಯವಿದೆ. ಬಿಡಿಎ ಘನತೆ ಬದಲಾಯಿಸಿ.
ಶಿಸ್ತು, ಪಾರದರ್ಶಕತೆ, ಸಕಾರಾತ್ಮಕ ಮನೋಭಾವದಲ್ಲಿ ಜನರಿಗೆ ಸ್ಪಂದಿಸಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಗ್ರಹ ಮಾಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಸುಧಾರಣೆಗಳು, ಸಾರ್ವಜನಿಕ ಅಹವಾಲು ನಿರ್ವಹಣೆ ಕುರಿತು ಬಿಡಿಎ ನೌಕರರಿಗೆ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.


