Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತ ರಾಷ್ಟ್ರೀಯ ಮಾಧ್ಯಮಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ತಿಳಿಸಿದ್ದಾರೆ.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

 ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ.

ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ