ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಾಸ್ಟೆಲ್ ಅಡುಗೆಯವರಿಗೆ, ಸಹಾಯಕರಿಗೆ ಹಾಗೂ ರಾತ್ರಿ ಕಾವಲುಗಾರರಿಗೆ ಒಂದು ದಿನದ ಪುನಶ್ಚೇತನ ಕಾರ್ಯಗಾರವನ್ನು ಇದೇ ಮೇ 30ರಂದು ಬೆಳಿಗ್ಗೆ 11.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಪಕ್ಕದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ ನಂತರದ ಪಿಯುಸಿ ಬಾಲಕಿಯರ ಬಿ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದೆ.
ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ ಉದ್ಘಾಟನೆ ನೆರವೇರಿಸುವರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಡಿ.ಸಿ.ಆರ್.ಇ. ಪೊಲೀಸ್ ನಿರೀಕ್ಷಕ ಜಯಪ್ಪ ನಾಯ್ಕ್, ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾಧ್ಯಕ್ಷ ಯಶವಂತ್ ಕುಮಾರ್ ಭಾಗವಹಿಸುವರು.
ಆರೋಗ್ಯಾಧಿಕಾರಿ ಜಾನಕಿ, ಅಗ್ನಿಶಾಮಕದಳ ಠಾಣಾಧಿಕಾರಿ ನರೇಂದ್ರ, ಓಂಸಾಯಿ ಸೆಕ್ಯೂರಿಟಿ ಸರ್ವಿಸಸ್ ವ್ಯವಸ್ಥಾಪಕ ಸತೀಶ್ ರೆಡ್ಡಿ ಉಪನ್ಯಾಸ ನೀಡುವರು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ತಿಳಿಸಿದ್ದಾರೆ.



