Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸ್ವಾಭಿಮಾನಿ ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ: ಶಾಂತಾ ಸುರೇಂದ್ರ

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಅಖಿಲ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಶ್ರಾವಣ ಸಂಭ್ರಮ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸೆ.೮ರ ಮಂಗಳವಾರ ಇಲ್ಲಿನ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ರಾಧಾಕೃಷ್ಣ ವೇಷ ಸ್ಪರ್ಧೆ, ವರಮಹಾಲಕ್ಷ್ಮಿ  ಪೂಜೆ, ರಾಖಿ ಹಬ್ಬದ ಪ್ರಯುಕ್ತ ಸಹೋದರರಿಗೆ ರಾಖಿ ಧಾರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸುರೇಂದ್ರ, ಸ್ವಾಭಿಮಾನಿ ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ. ಆದರೆ ಮಹಿಳೆಗೆ ಕಾನೂನು ಪ್ರಕಾರ ಸಿಗಬೇಕಾಗಿರುವ ಹಕ್ಕು ಹಾಗೂ ಸಾಮಾಜಿಕ ಸ್ಥಾನಮಾನ ಕಲ್ಪಿಸಲು ಸೂಕ್ತವಾಗಿ ದೊರೆಯುತ್ತಿಲ್ಲ. ಆದ್ದರಿಂದ ಮಹಿಳೆಯರು ಸ್ವಾಭಿಮಾನದಿಂದ ಸಂಘಟಿತರಾಗಿ ತಮ್ಮ ಹಕ್ಕು ಪಡೆದು ಕೊಳ್ಳಬೇಕೆಂದು ಕರೆ ನೀಡಿದರು.

Advertisement

ಸಮಾಜದಲ್ಲಿ ಮಹಿಳೆಯರ ಮೇಲಿನ ಸಂಕೋಲೆಗಳನ್ನು ಕಿತ್ತೆಸೆದು ಮಹಿಳಾ ವಿಮೋಚನೆಯ ಹಾದಿಯಲ್ಲಿ ಸಾಗಬೇಕಾದರೆ ಸಂಘಟನಾತ್ಮಕವಾಗಿ ಬಲಿಷ್ಠರಾಗಬೇಕು. ತಮ್ಮ ಹಕ್ಕಿಗಾಗಿ ಸಂಘಟಿತರಾಗಿ ಹೋರಾಡುವುದು ಅತ್ಯಗತ್ಯ ಎಂದರು.

ಮಹಿಳೆಯರಿಗೆ ಸಮಾಜದಲ್ಲಿ ನ್ಯಾಯಯುತವಾಗಿ ಸಿಗಬೇಕಾದ ಅವಕಾಶಗಳು ಲಭಿಸಿದರೆ ಎಲ್ಲ ರಂಗಗಳಲ್ಲೂ ಸಾಧನೆ ಮಾಡುತ್ತಾರೆ. ಅಂಥ ಸಾಮರ್ಥ್ಯ ಅವರಲ್ಲಿದೆ. ಪ್ರಸ್ತುತ ಸನ್ನಿವೇಶದಲ್ಲಿ ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಜಾತಿ, ಧರ್ಮ, ಸಾಮಾಜಿಕ ಮತ್ತು ಕೌಟುಂಬಿಕ  ಕಟ್ಟುಪಾಡುಗಳು ಅವರನ್ನು ತಡೆಯುತ್ತಿವೆ. ಮಹಿಳೆಯರು ಅಡುಗೆ ಕೋಣೆಯಿಂದ ಹೊರಬಂದು ರಾಜಕೀಯ ಹಾಗೂ ಸಾಮಾಜಿಕವಾಗಿ ಸಾರ್ವಜನಿಕವಾಗಿ ಎಲ್ಲ ರಂಗಗಳಲ್ಲೂ ತಮ್ಮ ಛಾಪು ಮೂಡಿಸಬೇಕೆಂದು ಹೇಳಿದರು.

ಸರ್ಕಾರ ಮಹಿಳೆಯರಿಗಾಗಿ ಹಲವು ಸೌಲಭ್ಯ ಕಲ್ಪಿಸಿದೆ. ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಸಮಾನತೆಯ ಅರಿವು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಭಿಗಳಷ್ಟೇ ಅಲ್ಲ, ಸಬಲರೂ ಆಗಬೇಕಿದೆ. ಭಾರತ ದೇಶದಲ್ಲಿ ಮಹಿಳೆಯರಿಗೆ ಇರುವ ಗೌರವ ಜಗತ್ತಿನ ಬೇರೆ ಯಾವುದೇ ದೇಶದಲ್ಲಿ ಇಲ್ಲ. ಆದರೂ ದುಷ್ಕರ್ಮಿಗಳು ಮಹಿಳೆಯರ ಮೇಲೆ ನಡೆಸುವ ಕುಕೃತ್ಯಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡುತ್ತದೆ. ಇದನ್ನು ತಡೆಗಟ್ಟಲು ಎಲ್ಲರೂ ಶ್ರಮಿಸಬೇಕಿದೆ ಎಂದರು.  

ಜಿಲ್ಲಾಧ್ಯಕ್ಷೆ ಗೀತಾ ನಿಂಗನಗೌಡ, ಶಿಲ್ಪ ಸತೀಶ್, ರಮೇಶ ಹೆಗಡೆ, ಗೋ. ರಮೇಶ್ ಗೌಡ, ಸುಗಂಧಿನಿ, ಪ್ರತಿಮಾ, ಸವಿತಾ ರಮೇಶ್, ಸವಿತ ಗೋಪಾಲ್, ಚಂದ್ರಮತಿ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಬಿಡುಗಡೆಲಿಂಗನಹಳ್ಳಿ ಗ್ರಾಮದಲ್ಲಿ ವೀರಗಲ್ಲು, ಮಾಸ್ತಿ ಗಲ್ಲು ಪತ್ತೆಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ:ಕೃಷ್ಣಪ್ಪ ಖ್ಯಾತ ನಟ ರಂಗಾಯಣ ರಘು ಭೇಟಿ: 'ಪ್ರೇಮದ ಊರಲ್ಲಿ' ಸಿನಿಮಾ ವೀಕ್ಷಿಸುವಂತೆ ಆತ್ಮೀಯ ಮನವಿಸೊಂಡೆಕೆರೆ ಗ್ರಾಮದ ಬಸಣ್ಣ ನಿಧನಹಿರಿಯ ಪತ್ರಕರ್ತ ಬಂಡಿಗಡಿ ನಂಜುಂಡಪ್ಪ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪಶ್ರೀರಂಗಪಟ್ಟಣದಿಂದ ಮೈಸೂರಿಗೆ ಬಂದ ದಸರಾ ವೈಭವ:…ಮಳೆಯಿಲ್ಲದೆ ಒಣಗಿದ ಜೋಳದ ಹೊಲ ವೀಕ್ಷಿಸಿದ ನಿಖಿಲ್ ಕುಮಾರಸ್ವಾಮಿ; ​HMT ಕಾರ್ಖಾನೆಯ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ರಣತಂತ್ರ: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಮಾಲೋಚನಾ ಸಭೆ