Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ರಾಯಲ್ ಚಾಲೆಂಜರ್ಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿದೆ.


ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿ ಸಲ್ಲಿಸಿದೆ.

 ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಲೀಕ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಲಿಮಿಟೆಡ್ ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ. ಆರ್‌ಸಿಬಿ ಸಂಭ್ರಮಾಚರಣೆಗೆ ಸೀಮಿತ ಪಾಸ್‌ಗಳು ಮಾತ್ರ ಲಭ್ಯವಿದೆ ಎಂದು RCSL ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ತಿಳಿಸಿತ್ತು ಎಂದು ಅರ್ಜಿಯಲ್ಲಿ ಹೇಳಿದೆ.

ಉಚಿತ ಪಾಸ್‌ಗಳಿಗೂ ಸಹ ಪ್ರವೇಶಕ್ಕೆ ಪೂರ್ವ ನೋಂದಣಿ ಕಡ್ಡಾಯ ಎಂದು ಹೇಳಲಾಗಿತ್ತು. ಮಧ್ಯಾಹ್ನ 1.45ಕ್ಕೆ ತೆರೆಯಬೇಕಿದ್ದ ಕ್ರೀಡಾಂಗಣದ ಗೇಟ್‌ಗಳನ್ನು ಮಧ್ಯಾಹ್ನ 3 ಗಂಟೆಗೆ ತೆರೆಯಲಾಗಿದ್ದು, ಇದರಿಂದಾಗಿ ಜನಸಂದಣಿ ಹೆಚ್ಚಾಗಿದೆ ಎಂದು ಅದು ಆರೋಪಿಸಿದೆ.

ಕಾರ್ಯಕ್ರಮ ನಿರ್ವಹಣಾ ಸಂಸ್ಥೆಯ ಪ್ರಕಾರ, ಪೊಲೀಸರ ಜನಸಂದಣಿ ನಿರ್ವಹಣೆಯ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ ಎಎನ್ನಲಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜೂನ್ 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದನ್ನು ಸ್ಮರಿಸಬಹುದಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ