Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆದ ಆರ್.ಎಸ್ ಪರಮೇಶ್ವರಪ್ಪಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಸಾಗರ ತಾಲೂಕು ಹೊಸಗುಂದ ವಾಸಿ ಹೆಚ್.ಎಸ್.ಜನಾರ್ಧನರವರಿಂದ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಭಾವಿ ಕೊರೆಸಲು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಎಂಬುವವರಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 2 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 40000 ರೂ. ದಂಡ ವಿಧಿಸಿ ಅದೇಶಿಸಿದೆ ಎಂದು ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..

ಜುಲೈ 2017ರಲ್ಲಿ ಆಪಾದಿತ ಅಧಿಕಾರಿ ತಮ್ಮ ಕಚೇರಿಯಲ್ಲಿ 10,000 ರೂ. ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿರುತ್ತಾರೆ. ಈ ಪ್ರಕರಣವನ್ನು ತನಿಖಾಧಿಕಾರಿ ಪೊಲೀಸ್ ಉಪಾಧೀಕ್ಷಕ ಎ. ಚಂದ್ರಪ್ಪ ತನಿಖೆ ಕೈಗೊಂಡು ಆಪಾದಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸಿರುತ್ತಾರೆ.

ಈ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಏ.02,2016 ರಂದು ವಿಚಾರಣೆ ನಡೆಸಿ ಆರೋಪ ದೃಢಪಟ್ಟಿರುವುದು ಕಂಡುಬಂದಿದ್ದು, ಆಪಾದಿತರಿಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 40,000 ರೂ. ಗಳ ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಡಿ.ಸುಂದರ್ ರಾಜ್ ವಾದ ಮಂಡಿಸಿರುತ್ತಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ