Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ತಾಲ್ಲೂಕು ಮಟ್ಟದ ಭವನಗಳಿಗೆ ರೂ.4 ಕೋಟಿ ಅನುದಾನ: ಸಚಿವ ಕೆ.ಹೆಚ್. ಮುನಿಯಪ್ಪ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ವಿವಿಧ ಸಮುದಾಯಗಳ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಲಾಗುವುದು. ತಾಲ್ಲೂಕು ಮಟ್ಟದ ಭವನಗಳಿಗೆ ರೂ.4 ಕೋಟಿ ಹಾಗೂ ಹೋಬಳಿ ಮಟ್ಟದ ಯೋಜನೆಗಳಿಗೆ ತಲಾ ರೂ.75 ಲಕ್ಷ ಅನುದಾನ ಒದಗಿಸಲಾಗುವುದು. ಜೊತೆಗೆ, ಅಗತ್ಯವಿರುವ ಸುಮಾರು 20 ಪಂಚಾಯಿತಿಗಳಲ್ಲಿ ಅಂಬೇಡ್ಕರ್ ಭವನ ಸೇರಿದಂತೆ ವಿವಿಧ ಸಮುದಾಯ ಭವನಗಳನ್ನು ತಲಾ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.

ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

Advertisement

ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಬಾಕಿ ಇರುವ ಯೋಜನೆಗಳಿಗೆ ಚಾಲನೆ ನೀಡುವ ಸಂಬಂಧ ಚಿತ್ರದುರ್ಗಕ್ಕೆ ತೆರಳುವ ಮಾರ್ಗಮಧ್ಯೆ ಹಿರಿಯೂರಿಗೆ ಭೇಟಿ ನೀಡಿದ್ದೇನೆ. ಈ ಹಿಂದೆ ಹಿರಿಯೂರು ಶಾಸಕರು ಹಾಗೂ ಸಚಿವರಾಗಿದ್ದ ಡಿ.ಸುಧಾಕರ್ ಅವಧಿಯಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದರು. ಆದರೆ, ಅವರ ಅಗಲಿಕೆಯಿಂದಾಗಿ ಹಲವು ಕೆಲಸಗಳು ಅಪೂರ್ಣಗೊಂಡಿವೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ, ಅವರು ಕನಸು ಕಂಡಿದ್ದ ಎಲ್ಲಾ ಯೋಜನೆಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು. ಇದರೊಂದಿಗೆ ಅಪೂರ್ಣಗೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ಕಾಮಗಾರಿಗಳು ಹಾಗೂ ಹಳೆಯ ವಸತಿ ಶಾಲೆಗಳ ಸುಧಾರಣೆ ಹಾಗೂ ನವೀಕರಣದ ಜೊತೆಗೆ, ಕ್ಷೇತ್ರಕ್ಕೆ ಒಂದೆರಡು ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡಲು ಪರಿಶೀಲಿಸಲಾಗುತ್ತಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿದ್ದು, ಇವರೊಂದಿಗೆ ಯಾದವ, ಒಕ್ಕಲಿಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಸೇರಿದಂತೆ ಎಲ್ಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ನೇರ ಸಾಲ ಹಾಗೂ ವಾಹನ ಖರೀದಿಗೆ ಸಾಲ ಸೌಲಭ್ಯ ಒದಗಿಸುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಹಿರಿಯೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಜಗಜೀವನ್ ರಾಮ್ ಭವನ ಸೇರಿದಂತೆ ಇಲಾಖೆಯ ಇತರ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಕೆ.ಹೆಚ್.ಮುನಿಯಪ್ಪ ಭರವಸೆ ನೀಡಿದರು.

ಯುವಜನರು ಹಾಗೂ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧ: ರಾಜ್ಯದಲ್ಲಿ ಯುವಜನರ ಸಬಲೀಕರಣ ಮತ್ತು ರೈತರ ಏಳಿಗೆಗಾಗಿ ಸರ್ಕಾರ ಹಲವು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಬದ್ಧವಾಗಿದೆ. ಯುವಜನರಿಗೆ ಪೆÇ್ರೀತ್ಸಾಹ ನೀಡಲು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಯುವಕರನ್ನು ಸಂಘಟಿಸಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಒತ್ತು ನೀಡಲಾಗುತ್ತಿದೆ. ಭಾರತ್ ಜೋಡೋ ಸಂಘಗಳ ಮೂಲಕ ಕ್ರೀಡೆ, ಸಾಂಸ್ಕøತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಜನರನ್ನು ತೊಡಗಿಸಲು ಪ್ರತಿ ಪಂಚಾಯಿತಿಗೆ ರೂ.10 ಲಕ್ಷದವರೆಗೆ ಅನುದಾನ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕನಸಿನ ಈ ಯೋಜನೆಯನ್ನು ಯಶಸ್ವಿಯಾಗಿ ಅನುμÁ್ಠನಗೊಳಿಸಿ ಯುವಕರಿಗೆ ಸೂಕ್ತ ತರಬೇತಿ ಹಾಗೂ ಪೆÇ್ರೀತ್ಸಾಹ ನೀಡುವ ಮೂಲಕ ಅವರನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಲು ಸಜ್ಜುಗೊಳಿಸಲಾಗುತ್ತಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಸಣ್ಣ ಹಾಗೂ ಅತಿ ಸಣ್ಣ ರೈತರ ನೆರವಿಗೆ ಯೋಜನೆ: ಸ್ವಂತ ಟ್ರ್ಯಾಕ್ಟರ್ ಅಥವಾ ಭೂಮಿ ಉಳುಮೆ ಮಾಡಲು ಸೌಲಭ್ಯವಿಲ್ಲದ ಸಣ್ಣ ಹಾಗೂ ಅತಿ ಸಣ್ಣ ರೈತರ ನೆರವಿಗೆ ಸರ್ಕಾರ ಮುಂದಾಗಿದೆ. 'ನೇಗಿಲ ಯೋಗಿ' ಯೋಜನೆಯಡಿ ಕೃಷಿ ಇಲಾಖೆಯ ನೇತೃತ್ವದಲ್ಲಿ ಉಚಿತವಾಗಿ ಭೂಮಿ ಉಳುಮೆ ಮಾಡಿಸಿಕೊಟ್ಟು, ರೈತರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಸಚಿವರು ವಿವರಿಸಿದರು.

ಜನರ ಮನೆ ಬಾಗಿಲಿಗೆ ಆಡಳಿತ: ಪ್ರಜಾಸೇವೆ ಹಾಗೂ ಜನಸಂಪರ್ಕವನ್ನು ಬಲಪಡಿಸಲು ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಕಡ್ಡಾಯವಾಗಿ ತಾಲ್ಲೂಕು ಹಾಗೂ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳ ತಂಡದೊಂದಿಗೆ ಸಾರ್ವಜನಿಕರ ಮನೆಬಾಗಿಲಿಗೆ ತೆರಳಿ, ಸೈಟು, ಮನೆ, ಖಾತೆ ಹಾಗೂ ಸಾಲ ಸೌಲಭ್ಯ ಸೇರಿದಂತೆ ವಿವಿಧ ಅರ್ಜಿಗಳನ್ನು ಸ್ವೀಕರಿಸಿ ಕಾಲಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಪ್ರಜಾಪ್ರಭುತ್ವ ದಿನ ಯುವ ಸಂಸತ್ ಸ್ಪರ್ಧೆ ಆಯೋಜನೆ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಯುವಜನರಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಜಾಗೃತಿ ಮೂಡಿಸಲು ಯುವ ಸಂಸತ್ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 15ರ ಪ್ರಜಾಪ್ರಭುತ್ವ ದಿನದಿಂದ ಆರಂಭಗೊಳ್ಳುವ ಈ ಜಾಗೃತಿ ಅಭಿಯಾನವು ನವೆಂಬರ್ 26ರ ಸಂವಿಧಾನ ದಿನದವರೆಗೆ ನಿರಂತರವಾಗಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಯುವ ಪೀಳಿಗೆಗೆ ದೇಶದ ಸ್ವಾತಂತ್ರ್ಯದ ಇತಿಹಾಸ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳು ಹಾಗೂ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸಿಕೊಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಅನುಭವ ಮಂಟಪದ ಪ್ರಜಾಸತ್ತಾತ್ಮಕ ಮಾದರಿಯನ್ನೇ ಆಧಾರವಾಗಿಟ್ಟುಕೊಂಡು ಯುವ ಸಂಸತ್ ಕಲ್ಪನೆಯನ್ನು ರೂಪಿಸಲಾಗಿದೆ ಎಂದು ವಿವರಿಸಿದರು.

ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ನವೆಂಬರ್ 26ರಂದು ರಾಜ್ಯ ಮಟ್ಟದಲ್ಲಿ ಬೃಹತ್ ಕಾರ್ಯಕ್ರಮ ನಡೆಸಿ, ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮಗಳು ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಲಿವೆ. ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಅರಿವು ಮೂಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಇದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು