Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೂದ್ರರು ಮತ್ತು ದಲಿತರ ಮೀಸಲಾತಿ ವಿರೋಧಿಸುತ್ತಾ RSS ಬಂದಿದೆ: ಸಿ.ಎಂ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.


ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್  ಆಯೋಗದಿಂದ ಹಿಡಿದು  ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ.ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು-
ರಾಹುಲ್ ಗಾಂಧಿ ಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ  ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ
, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿ ಹೆಚ್ಚು ಮಾಡಬೇಕು ಎಂದು ಸಿಎಂ ಒತ್ತಾಯಿಸಿದರು.

 ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಶೇ.50% ಗಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ 50% ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದರು.

ಹಿಂದುಳಿದವರಿಗೆ ಮೀಸಲಾತಿ  ಅತ್ಯಂತ ಅನಿವಾರ್ಯ ಮತ್ತು ಅಗತ್ಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ.  ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ  ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದರು.

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ತರಲು ಆಗ್ರಹ-
ಮೀಸಲಾತಿಯಲ್ಲಿ ಶೇ.
50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ನ್ಯಾ.ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸಬೇಕು-ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ  ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ
, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ