Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ ಮನೆಗೆ ಪೊಲೀಸ್ ಯೋಜನೆಗೆ ಚಾಲನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮನೆ
ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹೇಳಿದರು.

 ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯರಿಂದ ಸೂಕ್ಷ್ಮ ಮಾಹಿತಿಗಳನ್ನು ಪಡೆದುಕೊಳ್ಳಲು, ಅಪರಾಧಗಳನ್ನು ತಡೆಯಲು ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್‌ ವ್ಯವಸ್ಥೆಯಲ್ಲಿಸಾರ್ವಜನಿಕ ಸಹಭಾಗಿತ್ವ ಹೆಚ್ಚಾಗಿ, ಇಲಾಖೆ, ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಬಹುದಾಗಿದೆ ಎಂದು ತಿಳಿಸಿದರು.

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಹಲವು ಪ್ರಕರಣಗಳಲ್ಲಿ ಜನರನ್ನು ಯಾಮಾರಿಸಿ ಹಣ ಕೀಳುವ, ಮೋಸ ಮಾಡುವ ಕೃತ್ಯಗಳು ಹೆಚ್ಚಾಗಿ ಕಂಡುಬರುತ್ತಿವೆ ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್‌ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಈ ಅಭಿಯಾನ ಸಹಾಯವಾಗಲಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ.

ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ, ಪೊಲೀಸರು ಮನೆಗೆ ಬಂದಾಗ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಂದು ಹೇಳಿದರು.

ಡಿವೈಎಸ್ಪಿ ರವಿ ಕುಮಾರ್ ಮಾತನಾಡಿ,ಪ್ರತಿಯೊಂದು ಪೊಲೀಸ್‌ ಠಾಣೆಗಳ ಇಬೀಟ್‌ ವ್ಯವಸ್ಥೆ ಅನ್ವಯ ವಿಂಗಡಿಸಲಾದ ಪ್ರದೇಶದಲ್ಲಿರುವ ಮನೆಗಳ ಪಟ್ಟಿ ಮಾಡಿಕೊಂಡು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ, ಆಹವಾಲು ಆಲಿಸಲಿದ್ದಾರೆ. ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ಸಮಾಜದಲ್ಲಿ ಆಗಬಹುದಾದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿದ್ದಾರೆ ಎಂದರು. 

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಬಹಳಷ್ಟು ದೂರುಗಳು ಬಂದವು. ಶಾಲೆಯಲ್ಲಿ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂದು ಶಾಲಾ ವಿದ್ಯಾರ್ಥಿ ಹೇಳಿದರು. ಅಟ್ರಾಸಿಟಿ ಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕುಂದು ಕೊರತೆ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ, ನಗರ ಠಾಣೆಯ ಇನ್ಸಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆಯ ಇನ್ಸಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ದೊಡ್ಡಬೆಳವಂಗಲ ಠಾಣೆಯ ಇನ್ಸಪೆಕ್ಟರ್ ಕಲ್ಲಪ್ಪ, ಹೊಸಹಳ್ಳಿ ಠಾಣೆಯ ರಾವ್ ಗಣೇಶ ಹಾಗೂ ಸಿಬ್ಬಂದಿ, ದಲಿತ ಮುಖಂಡರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ