Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌.ಎಂ. ಕೃಷ್ಣ ನಗರದಲ್ಲಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರ ಬಿರುಸಿನ ಮತಯಾಚನೆ

Advertisement
ಚಂದ್ರವಳ್ಳಿ ನ್ಯೂಸ್, ​ದಾವಣಗೆರೆ:
ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್‌.ಎಂ. ಕೃಷ್ಣ ನಗರದಲ್ಲಿ ಉಪಚುನಾವಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರ ಪರವಾಗಿ ಭರ್ಜರಿ ಮತಯಾಚನೆ ನಡೆಸಲಾಯಿತು. ಮನೆ ಮನೆಗೆ ತೆರಳಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಸಾಧನೆಗಳನ್ನು ವಿವರಿಸಿ
, ಕಮಲದ ಗುರುತಿಗೆ ಮತ ನೀಡುವಂತೆ ಮನವಿ ಮಾಡಿದರು.

​ಹಣಬಲ ವರ್ಸಸ್ ಜನಬಲದ ಹೋರಾಟ-
​ಪ್ರಚಾರದ ವೇಳೆ ಮಾತನಾಡಿದ ಮುಖಂಡರು
, ಈ ಬಾರಿಯ ಚುನಾವಣೆ ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ. ಇದು ಹಣಬಲ ಮತ್ತು ಜನಬಲದ ನಡುವಿನ ಹೋರಾಟ. ಹಾಗೆಯೇ ಆಡಳಿತಾರೂಢರ ಅಧಿಕಾರಬಲ ಮತ್ತು ಜನರ ವಿಶ್ವಾಸದ ನಡುವಿನ ಸಂಘರ್ಷವಾಗಿದೆ ಎಂದು ಬಣ್ಣಿಸಿದರು.

​"ಬಿಜೆಪಿ ಯಾವಾಗಲೂ ನೀತಿಯ ಪರವಾಗಿ ಮತ್ತು ಬಡವರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಾ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ಕಂಗೆಟ್ಟಿದ್ದಾರೆ," ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

​ಬೆಲೆ ಏರಿಕೆ ವಿರುದ್ಧ ವಾಗ್ದಾಳಿ-
​ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಬಡವರ ಬದುಕನ್ನು ದುಸ್ಥಿತಿಗೆ ತಳ್ಳಿದೆ. ಕಾಂಗ್ರೆಸ್‌ನ ಈ ಜನವಿರೋಧಿ ನೀತಿಗಳಿಗೆ ಈ ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಪ್ರಚಾರದ ವೇಳೆ ವಿಶ್ವಾಸ ವ್ಯಕ್ತಪಡಿಸಲಾಯಿತು.


​​ಈ ಮತಯಾಚನಾ ಸಂದರ್ಭದಲ್ಲಿ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ದೊಡ್ಡ ಪಡೆಯೇ ಸಾಥ್ ನೀಡಿತ್ತು.
ಯಶವಂತರಾವ್ ಜಾಧಬ್ (ಸ್ಥಳೀಯ ಬಿಜೆಪಿ ಮುಖಂಡರು). ರಾಜನಹಳ್ಳಿ ಶಿವಕುಮಾರ್, ಕೃಷ್ಣಮೂರ್ತಿ ಪಾವರ್, ಜಯಮ್ಮ (ಮಾಜಿ ಮಹಾಪೌರರು)​ಇವರೊಂದಿಗೆ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಿದರು.


 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ