ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾಗಿ ಎಸ್.ರಮ್ಯ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ವೆಂಕಟೇಶ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಎಸ್.ರಮ್ಯ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.
ಎಸ್.ರಮ್ಯ ಅವರು ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೊಮ್ಮೇನಹಳ್ಳಿ ವಲಯ ಆಯುಕ್ತೆಯಾಗಿ ಹಾಗೂ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕೆಲಸ ನಿರ್ವಹಿಸಿದ್ದಾರೆ.
ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಫೋಟೋ ವಿವರ: ನೂತನ ಜಿಲ್ಲಾಧಿಕಾರಿಯಾಗಿ ಎಸ್.ರಮ್ಯ ಅವರು ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೂಗಚ್ಛ ನೀಡಿ ಸ್ವಾಗತಿಸಿದರು.




