ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಮೃತಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಟಿ.ಪಿ. ಉಮೇಶ್, ಹರಿದು ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯ ಉದಯವಾಯಿತು ಹಾಗೂ 1973ರಲ್ಲಿ 'ಕರ್ನಾಟಕ' ಎಂದು ಮರುನಾಮಕರಣಗೊಂಡ ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿದರು. ಕನ್ನಡವೆಂದರೆ ಕೇವಲ ಭಾಷೆಯಲ್ಲ, ಅದೊಂದು ಸಾವಿರಾರು ವರ್ಷಗಳ ಇತಿಹಾಸವಿರುವ ಜೀವಂತ ಪರಂಪರೆ ಎಂದು ತಿಳಿಸಿದರು.
ಮಕ್ಕಳಾದ ಅಂಜಲಿ, ಮಾನಸ, ಭಾನು ಮತ್ತು ಮನೋಜ್ ನಾಡು-ನುಡಿಯ ಕುರಿತು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಮುಖಂಡರಾದ ಕಾಂತರಾಜು, ಬಸವರಾಜು, ರಂಗಸ್ವಾಮಿ, ಸಹಶಿಕ್ಷಕಿ ಜಿ.ಎನ್. ರೇಷ್ಮಾ, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ಪೋಷಕರು ಉಪಸ್ಥಿತರಿದ್ದರು.




