Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಅವರನ್ನು ಸೋಲಿಸಿದ್ದ ಸದೋಬಾಗೆ ಪದ್ಮಭೂಷಣ ಪ್ರಶಸ್ತಿ ನೀಡಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹದೇವಪ್ಪನವರೇ
, ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕಾಂಗ್ರೆಸ್ ಪಕ್ಷ ಎಂದು ಅವರು ವಾಗ್ದಾಳಿದರು.

ಬಾಬಾಸಾಹೇಬರ ಸೋಲಿಗೆ ಇಷ್ಟೆಲ್ಲಾ ಕುತಂತ್ರ, ಹುನ್ನಾರ ಮಾಡಿ, ಅವರಿಗೆ ಭಾರತ ರತ್ನವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್ ಪಕ್ಷ ಇಂದು ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ವೀರ ಸಾವರ್ಕರ್ ಸಂಚು ಮಾಡಿದ್ದರು ಎಂದು ಹೇಳುವುದು ನಾಚಿಕೆಗೇಡಿನ ಪರಮಾವಧಿ.

ಅಂಬೇಡ್ಕರ್ ಅವರ ಸಮಗ್ರ ಜೀವನ ಚರಿತ್ರೆಯಲ್ಲಿಯೂ, 1974ರಲ್ಲಿ ಸ್ವತಃ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಪುಸ್ತಕದಲ್ಲಿಯೂ, ಕರ್ನಾಟಕ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಅಂಬೇಡ್ಕರ್ ಸಮಗ್ರದಲ್ಲಿಯೂ ಈ ಬಗ್ಗೆ ಎಲ್ಲಿಯೂ ಸಾವರ್ಕರ್ ಅವರ ಈ ವಿಚಾರದ ಬಗ್ಗೆ ಉಲ್ಲೇಖವಿಲ್ಲ ಎಂದು ಅಶೋಕ್ ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರರ ಬಗ್ಗೆ ಇದ್ದ ಅಸಹನೆ, ಅವರನ್ನ ತುಳಿಯಲು, ಕಡೆಗಳಿಸಲು ಪದೇ ಪದೇ ಮಾಡಿದ ಪ್ರಯತ್ನಗಳು ಇತಿಹಾಸದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಕಾಂಗ್ರೆಸ್ ಪಕ್ಷ ಅಂಬೇಡ್ಕರರಿಗೆ ಮಾಡಿದ ಅನ್ಯಾಯ, ಅವರನ್ನ ನಡೆಸಿಕೊಂಡ ರೀತಿ ಬಗ್ಗೆ ತಮ್ಮದೇ ಪಕ್ಷದ ಹಿರಿಯ ನಾಯಕರು, ಸಿಎಂ ಸಿದ್ದರಾಮಯ್ಯನವರ ಆಪ್ತರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದಲ್ಲೇ ಏನು ಹೇಳಿದ್ದಾರೆ ಎಂದು ಒಮ್ಮೆ ಕೇಳಿ. ನಿಜವಾದ ಅಂಬೇಡ್ಕರ್ ಅನುಯಾಯಿಗಳು ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಅಶೋಕ್ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ