Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ; ಸಿಎಂ, ಡಿಸಿಎಂ ಭಾಗಿ​

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀ ಸಮರ್ಥ್ ಶಾಮನೂರು ಅವರು ಮಾರ್ಚ್
23ರ ಸೋಮವಾರದಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

​ಹಿರಿಯ ನಾಯಕರಾದ ಡಾ. ಶಾಮನೂರು ಶಿವಶಂಕರಪ್ಪನವರ ಆಶೀರ್ವಾದದೊಂದಿಗೆ ನಡೆಯಲಿರುವ ಈ ಪ್ರಮುಖ ರಾಜಕೀಯ ವಿದ್ಯಮಾನಕ್ಕೆ ರಾಜ್ಯದ ಘಟಾನುಘಟಿ ನಾಯಕರು ಸಾಕ್ಷಿಯಾಗಲಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.

​ಗಣ್ಯರ ಉಪಸ್ಥಿತಿ-
​ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಈ ಕೆಳಗಿನ ಪ್ರಮುಖರು ಭಾಗವಹಿಸಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ​ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.


​ಮೆರವಣಿಗೆಯ ಮಾರ್ಗ ಸೂಚಿ-
​ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗಿದೆ.
ಮಾರ್ಚ್-23 ರಂದು ಸೋಮವಾರ ​ಬೆಳಿಗ್ಗೆ
10 ಗಂಟೆಗೆ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

​ಮಾಲಾರ್ಪಣೆ: ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಗೌರವ ಸಮರ್ಪಣೆ.​ಧಾರ್ಮಿಕ ಸೌಹಾರ್ದತೆ: ಹಜರತ್ ಖಡಕ್ ಷಾವಲಿ ದರ್ಗಾಕ್ಕೆ ಭೇಟಿ ಮತ್ತು ಪ್ರಾರ್ಥನೆ.

​ಸಂಚರಿಸುವ ಮಾರ್ಗ: ಹಳೇಪೇಟೆ, ಹಗೇದಿಬ್ಬ ಸರ್ಕಲ್, ಗಾಂಧಿನಗರ, ಅಜಾದ್ ನಗರ, ಅಹಮ್ಮದ್ ನಗರ ರಸ್ತೆ, ಚಾರ್ಲಿ ಪೈಲ್ವಾನ್ ಸರ್ಕಲ್, ಹಾಸಬಾವಿ ಸರ್ಕಲ್, ಚಾಮರಾಜಪೇಟೆ ಮುಖ್ಯರಸ್ತೆ, ಮಂಡಿಪೇಟೆ ಮತ್ತು ರೈಲ್ವೇ ಅಂಡರ್ ಬ್ರಿಡ್ಜ್ ಮೂಲಕ ಪಿ.ಬಿ. ರಸ್ತೆ ತಲುಪಲಿದೆ.

​ಸಮಾಪ್ತಿ: ಮಧ್ಯಾಹ್ನ 3 ಗಂಟೆಗೆ ಮಹಾನಗರ ಪಾಲಿಕೆ ಕಚೇರಿಗೆ ತಲುಪಿ ನಾಮಪತ್ರ ಸಲ್ಲಿಕೆಯೊಂದಿಗೆ ಮೆರವಣಿಗೆ ಮುಕ್ತಾಯಗೊಳ್ಳಲಿದೆ.

​ಮನವಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ವಿನಂತಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ