Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಗ್ರಾಮಾಂತರ -ಕೋಲಾರ - ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ - ಧಾರವಾಡ- ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರ್ಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಿದೆ.


ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.

ಕೇಂದ್ರ ಸರ್ಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂಬುದನ್ನು ರಕ್ಷಣಾ ಸಚಿವರಿಗೆ ನಿಯೋಗವು ಮನದಟ್ಟು ಮಾಡಿಕೊಟ್ಟಿತು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಅವರ ಗಮನಕ್ಕೆ ತರಲಾಗಿದೆ.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ.

ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ರಾಜನಾಥ್‌ ಸಿಂಗ್‌ ಅವರು ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ