Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಸಿ ನೆಡುವ ಕಾರ್ಯಕ್ರಮ; ತ್ಯಾಜ್ಯ ವಿಂಗಡಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಿರಿಯೂರು ನಗರಸಭೆ, ತಾಲ್ಲೂಕಿನ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ನಗರದ ವಿವಿಧ ಪಾರ್ಕ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗಿಡ ನೆಟ್ಟು ಚಾಲನೆ ನೀಡಿದ ನ್ಯಾಯಾಧೀಶರು:
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜೆ.ಎಂ.ಎಫ್.ಸಿ ಹಾಗೂ ಅಧ್ಯಕ್ಷರಾದ ಶ್ರೀಮತಿ ಸುಜಾತ ಸುವರ್ಣ ಬಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಪಾರ್ವತಮ್ಮ, ಮತ್ತು ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ರಘು ಎಂ ರವರುಗಳು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು.

Advertisement

ತ್ಯಾಜ್ಯ ಮುಕ್ತ ನಗರಕ್ಕೆ ಕರೆ: 4 ಬಿನ್ಗಳ ಸೂತ್ರ ವಿವಿರಣೆ:
ಇದೇ ಸಂದರ್ಭದಲ್ಲಿ ಘನ ತ್ಯಾಜ್ಯವಸ್ತು ನಿರ್ವಹಣೆ ನಿಯಮ 2026ರ ಅನ್ವಯ ಸಾರ್ವಜನಿಕರಿಗೆ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸುವ ಮಹತ್ವದ ಕುರಿತು ನಗರಸಭೆ ಪೌರಾಯುಕ್ತ ಎ.ವಾಸೀಂ ಅವರು ಅರಿವು ಮೂಡಿಸಿದರು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ, ಪ್ರತ್ಯೇಕ 4 ಬಿನ್‌ಗಳಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವ ವಿಧಾನವನ್ನು ಅಧಿಕಾರಿಗಳು ಮತ್ತು ಗಣ್ಯರು ಸಾರ್ವಜನಿಕರಿಗೆ ವಾಸೀಂ ಅವವರು ವಿವರಿಸಿದರು.

ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಆರೈಕೆ ತ್ಯಾಜ್ಯ:
"ಘನ ತ್ಯಾಜ್ಯದ ಸಮರ್ಪಕ ನಿರ್ವಹಣೆಯಿಂದ ಮಾತ್ರ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ, ಸುಂದರ ಮತ್ತು ಆರೋಗ್ಯಕರವಾಗಿ ನಿರ್ಮಿಸಲು ಸಾಧ್ಯ" ಎಂದು ಪೌರಾಯುಕ್ತ ಎ.ವಾಸೀಂ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಹಾಗೂ ವಲಯ ಅರಣ್ಯಾಧಿಕಾರಿ ಬಾಬು ಎಸ್ ಮತ್ತು ಅರಣ್ಯ ಇಲಾಖೆಯ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯೂರು ನಗರಸಭೆಯ ಆರೋಗ್ಯ ನಿರೀಕ್ಷಕರುಗಳಾದ ಸಂಧ್ಯಾ ವೈ.ಎಸ್, ಸುನೀಲ್ ಕುಮಾರ್, ನಯಾಜ್ ಷರೀಪ್, ಅಶೋಕ್ ಕುಮಾರ್, ಮಹಾಲಿಂಗರಾಜ್ ಹಾಗೂ ನಗರಸಭೆಯ ಇತರೆ ಸಿಬ್ಬಂದಿಗಳು, ತಾಲ್ಲೂಕಿನ ಕಾನೂನು ಸೇವಾ ಸಮಿತಿಯ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು