Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಭವದ ಸಪ್ತ ಮಾತೃಕಾ ಮಾರಿಯಮ್ಮ ದೇವಿ ಕರಗ ಮಹೋತ್ಸವ ಸಂಪನ್ನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ವನ್ನಿಗರಪೇಟೆಯಲ್ಲಿನ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಹೂವಿನ ಕರಗ ಮಹೊತ್ಸವ ಅದ್ದೂರಿಯಾಗಿ ನೇರವೇರಿತು.


 ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ವೀಕ್ಷಿಸಿದರು. ಕರಗ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೆ ಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಸೇರಿದಂತೆ ಮತ್ತಿತರ ಕಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು. ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು. 

  14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಕರಗ ಹೊತ್ತಿರುವ ಆಂಧ್ರಪ್ರದೇಶ ಮೂಲದ ಕುಪ್ಪಂ ನಿವಾಸಿ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪ್ರಸಾದ ವಿನಿಯೋಗ ನಡೆಯಿತು. 

  ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ