LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತೆ ಮೇಲೆ ಪೈಶಾಚಿಕ ಅತ್ಯಾಚಾರ, ಯುವತಿ ಅಪಹರಿಸಿ ಗ್ಯಾಂಗ್‌ರೇಪ್: 6 ಜನರ ಬಂಧನ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ / ಮೈಸೂರು:
ದೇವನಹಳ್ಳಿ ಹಾಗೂ ತಿ.ನರಸೀಪುರದಲ್ಲಿ ಪ್ರತ್ಯೇಕವಾಗಿ ದೌರ್ಜನ್ಯದ ಘಟನೆಗಳು ನಡೆದಿವೆ. ದೇವನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದರೆ, ತಿ.ನರಸೀಪುರದಲ್ಲಿ ಬಸ್ ನಿಲ್ದಾಣದಲ್ಲಿದ್ದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 6 ಜನರನ್ನು ಬಂಧಿಸಿದ್ದಾರೆ.

ಘಟನೆ 1: ದೇವನಹಳ್ಳಿಯಲ್ಲಿ ಅಪ್ರಾಪ್ತೆಯ ಮೇಲೆ ಅಮಾನವೀಯ ಕೃತ್ಯ – ಮಹಿಳೆ ಸೇರಿ ಮೂವರ ಬಂಧನ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):
ದೇವಸ್ಥಾನಕ್ಕೆ ಹೋಗೋಣ ಎಂದು ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಆಟೋದಲ್ಲಿ ಕರೆದೊಯ್ದು, ಬಲವಂತವಾಗಿ ಮದ್ಯಪಾನ ಮಾಡಿಸಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ರಾತ್ರಿಯಿಡೀ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ದೇವನಹಳ್ಳಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕೃತ್ಯದ ವಿವರ: ಜುಲೈ 17ರ ರಾತ್ರಿ ಮಹಿಳೆಯೊಬ್ಬಳು ಬಾಲಕಿಯನ್ನು ದೇವಸ್ಥಾನಕ್ಕೆ ಕರೆದೊಯ್ಯುವ ನೆಪದಲ್ಲಿ ಕರೆತಂದಿದ್ದಳು. ಬಳಿಕ ಇಬ್ಬರು ಆರೋಪಿಗಳು ಆಟೋದಲ್ಲಿ ಬಾಲಕಿಯನ್ನು ಕರೆದೊಯ್ದು, ಮದ್ಯ ಕುಡಿಸಿ ತೀವ್ರ ಹಲ್ಲೆ ನಡೆಸಿ ನಿರ್ಮಾಣ ಹಂತದ ಕಟ್ಟಡದಲ್ಲಿ ಅತ್ಯಾಚಾರ ಎಸಗಿದ್ದಾರೆ.

ಬೆದರಿಕೆ ಮತ್ತು ದೂರು: ಮಾರನೇ ದಿನ ಬೆಳಿಗ್ಗೆ ಬಾಲಕಿಯನ್ನು ಮನೆ ಬಳಿ ಬಿಟ್ಟು, ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಮಗಳ ಸ್ಥಿತಿ ಕಂಡು ಅನುಮಾನಗೊಂಡ ತಾಯಿ ಪ್ರಶ್ನಿಸಿದಾಗ ಕೃತ್ಯ ಬಯಲಾಗಿದೆ.

ಪೋಕ್ಸೋ ಪ್ರಕರಣ: ಪೋಷಕರ ದೂರಿನನ್ವಯ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ದೇವನಹಳ್ಳಿ ಪೊಲೀಸರು, ಕೃತ್ಯ ಎಸಗಿದ ಇಬ್ಬರು ಪುರುಷರು ಹಾಗೂ ನೆರವಾದ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ 2: ತಿ.ನರಸೀಪುರದಲ್ಲಿ ಬಂಗಾಳ ಮೂಲದ ಯುವತಿಯ ಅಪಹರಣ, ಸಾಮೂಹಿಕ ಅತ್ಯಾಚಾರ
ತಿ.ನರಸೀಪುರ (ಮೈಸೂರು):
ಬಸ್ ನಿಲ್ದಾಣದಲ್ಲಿದ್ದ ಪಶ್ಚಿಮ ಬಂಗಾಳ ಮೂಲದ 30 ವರ್ಷದ ಯುವತಿಯನ್ನು ಕಾರಿನಲ್ಲಿ ಅಪಹರಿಸಿ, ಲಾಡ್ಜ್‌ವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜುಲೈ 18ರ ರಾತ್ರಿ ತಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದ ಬಳಿ ನಡೆದಿದೆ.

ಕೃತ್ಯದ ವಿವರ: ತಿ.ನರಸೀಪುರದಲ್ಲಿ ಬಾಡಿಗೆ ಮನೆಯಲ್ಲಿದ್ದು ಕೆಲಸ ಮಾಡುತ್ತಿದ್ದ ಯುವತಿ, ಶನಿವಾರ ರಾತ್ರಿ ಸ್ನೇಹಿತರ ಮನೆಯಲ್ಲಿ ಜನ್ಮದಿನ ಆಚರಿಸಿ ವಾಪಸ್ ಬರುವಾಗ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ಮೂವರು ವಿಳಾಸ ಕೇಳುವ ನೆಪದಲ್ಲಿ ಯುವತಿಯನ್ನು ಅಪಹರಿಸಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯ ಮೇಲೆ ಹಲ್ಲೆ ನಡೆಸಿ ಮೊಬೈಲ್ ಫೋನ್ ಹಾಗೂ 5,000 ಹಣವನ್ನು ದೋಚಿದ್ದಾರೆ.

ಆರೋಪಿಗಳ ಬಂಧನ: ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿ.ನರಸೀಪುರದ ಕಿರಣ್ (ಅಲಿಯಾಸ್ ಹುಚ್ಚ), ರಿಹಾನ್‌ಖಾನ್ ಹಾಗೂ ಕಿಶೋರ್ ಕುಮಾರ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'