Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಷರದ ಅವ್ವ...,ಶೋ಼ಷಿತರ ಬೆಳಕು ಸಾವಿತ್ರಿಬಾಯಿ ಫುಲೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ಷರದ ಅವ್ವ...,ಶೋ಼ಷಿತರ ಬೆಳಕು ಸಾವಿತ್ರಿಬಾಯಿ ಫುಲೆ (ಜನವರಿ 3....ಜನ್ಮದಿನ)
ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಮಹಿಳಾ ಶಿಕ್ಷಕಿ, ಮತ್ತು ಸಮಾಜ ಸುಧಾರಕ ಮಹಿಳೆ ಮತ್ತು ಕೆಳವರ್ಗದವರಿಗೆ ಕೆಲಸ ಮಾಡಲು ಹೆಸರುವಾಸಿಯಾಗಿದ್ದರು.

ಅವರು 19 ನೇ ಶತಮಾನದಲ್ಲಿ ಪುಣೆ (ಮಹಾರಾಷ್ಟ್ರ) ಸಮಾಜದಲ್ಲಿ ಪ್ರಚಲಿತದಲ್ಲಿರುವ ದಬ್ಬಾಳಿಕೆಯ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದರು. ಆಕೆಯ ಕೊಡುಗೆ ವೈಚಾರಿಕತೆ ಮತ್ತು ಸತ್ಯ, ಸಮಾನತೆ ಮತ್ತು ಮಾನವೀಯತೆಯಂತಹ ಮಾನವ ಕಾರಣಗಳು ಸುತ್ತುತ್ತವೆ. ಸಾವಿತ್ರಿಬಾಯಿ ಫುಲೆ ಅವರು ತಮ್ಮ ಸಮಯಕ್ಕಿಂತ ಮೊದಲು ಆದರ್ಶಪ್ರಾಯ ಸಮಾಜ ಸುಧಾರಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ.

ಸಾವಿತ್ರಿಬಾಯಿ ಫುಲೆ ೧೮೩೧ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು. ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು.

ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕುಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಬೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಬೇತಿ ಆದ ಮೊದಲ ಶಿಕ್ಷಕಿಯಾದರು

ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ತ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.

ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.

ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಚಿಸಿದ್ದರು.

ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿಬಾಯಿ ಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಒಟ್ಟು 14 ಶಾಲೆಗಳನ್ನು ಸ್ಥಾಪನೆ ಮಾಡುತ್ತಾರೆ.

ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ,‌ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ - ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.

ಜ್ಯೋತಿಬಾ ಅವರ ತತ್ವ ಮತ್ತು ಪ್ರಗತಿಪರ ದೃಷ್ಟಿಕೋನವನ್ನು ತಮ್ಮದಾಗಿಸಿಕೊಳ್ಳುವ ಸಾವಿತ್ರಿಬಾಯಿಯವರು ಜೀವಮಾನವಿಡೀ ಪತಿಯೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲುತ್ತಾರೆ. ಇವರಿಬ್ಬರ ನಡುವೆ ಒಂದು ಮಧುರವಾದ ಬಾಂಧವ್ಯ ಮತ್ತು ವೈಯಕ್ತಿಕ ಭಾವನೆಗಳನ್ನು ಗೌರವಿಸಿಕೊಳ್ಳುವ ಗುಣವಿತ್ತು. ಅವರಿಗೆ ಮಕ್ಕಳಿರದಿದ್ದರು ಸಂತೋಷವಾಗಿದ್ದರು. ಪತ್ನಿಯ ಮೇಲೆ ಅಗಾಧ ಪ್ರೀತಿ ಹೊಂದಿದ್ದ ಜ್ಯೋತಿಬಾ ಫುಲೆ ಅವರು ಮಕ್ಕಳಿಗಾಗಿ ಮರುಮದುವೆಯಾಗಲಿಲ್ಲ.



ಮುಂದೆ ಫುಲೆ ದಂಪತಿಗಳು ೧೮೭೪ರಲ್ಲಿ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು, ಆತ ಸಮಾಜದಲ್ಲಿ ಸತ್ಪ್ರಜೆಯಾಗುವ ಅವಕಾಶವನ್ನು ಕಲ್ಪಿಸುತ್ತಾರೆ. ೧೮೬೩ರಲ್ಲಿ ಅನಾಥ ಮಕ್ಕಳಿಗಾಗಿ ಶಿಶುಕೇಂದ್ರವನ್ನು ತೆರೆಯುತ್ತಾರೆ. ಆ ಅನಾಥ ಮಕ್ಕಳೊಂದಿಗೆ ಪ್ರಾಂಜಲ ಮನಸ್ಸಿನಿಂದ ಬೆರೆಯುತ್ತಾರೆ.

೧೫೦ ವರ್ಷಗಳ ಹಿಂದೆಯೇ ಸಾವಿತ್ರಿ ಬಾಯಿ ಶಾಲೆಯನ್ನು ತೊರೆಯದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು.

೧೮೬೦ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು.

ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟು ಶಿಕ್ಷಣ ನೀಡಿದ ಸಾವಿತ್ರಿಬಾಯಿ 'ಸತ್ಯೋಧಕ' ಸಮಾಜದ ಅಧ್ಯಕ್ಷೆಯಾಗಿದ್ದರು. ೧೯ನೇ ಶತಮಾನದ ಇತಿಹಾಸದಲ್ಲಿ ಮದುವೆಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸಿದ್ದರು. ಅಲ್ಲದೆ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿ.

ಪತಿಯ ಮರಣಾನಂತರ ಅವರು ಸ್ಥಾಪಿಸಿದ್ದ ಸತ್ಯ ಶೋಧಕ ಸಮಾಜದ ಜವಾಬ್ದಾರಿಯನ್ನು ಹೊತ್ತುಕೊಂಡರು. 1897ರಲ್ಲಿ ಪ್ಲೇಗ್ ಪೀಡಿತರ ಸೇವೆ ಮಾಡುತ್ತಾ ತಾವೂ ಆ ರೋಗಕ್ಕೆ ಬಲಿಯಾಗಿ ಮಾರ್ಚ್ 10ರಂದು ಮರಣ ಹೊಂದಿದರು.

ನೂರಾರು ವರ್ಷಗಳ ಹಿಂದೆಯೇ ಶೋಷಣೆಯ ವಿರುದ್ದ ಕ್ರಾಂತಿಯ ಕಹಳೆ ಊದಿದ,ಮಹಿಳೆಯರ ಶಿಕ್ಷಣಕ್ಕೆ ರಹದಾರಿ ಮಾಡುವ ಕಾಯಕಕ್ಕೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದ ತಾಯಿಗೆ ಮನದಾಳದ ನಮನಗಳು.ಅವರ ಕಾಯಕಕ್ಕೆ ನೆರವು ನೀಡಿದ ಸಮಾಜಮುಖಿ ಚಿಂತನೆಯ ಅವರ ಪತಿ ಜ್ಯೋತಿಬಾ ಫುಲೆ ಕೂಡ ಸ್ಮರಣೀಯರು.
ಲೇಖನ: ಚಮನ್ ಷರೀಫ್, ಆದಿವಾಲ,

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ