LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರಿಗೆ 2026-27ನೇ ಸಾಲಿನ ಶಿಷ್ಯವೇತನ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಗಸ್ಟ್ 25 ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶ್ರೀರಾಮ ಕಾಂಪ್ಲೆಕ್ಸ್, 1ನೇ ಮಹಡಿ, ಆಂಜನೇಯ ದೇವಸ್ಥಾನದ ಎದುರು, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಕಛೇರಿಯಲ್ಲಿ ಪಡೆದು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಬೌದ್ಧ ಅಥವಾ ಸಿಖ್ ಸಮುದಾಯಕ್ಕೆ ಸೇರಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಒಳಗೆ ಎಲ್.ಎಲ್.ಬಿ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ವಯೋಮಿತಿ 38 ವರ್ಷ ಮೀರಬಾರದು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮೀರಿರಬಾರದು ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸುವುದು ಕಡ್ಡಾಯ.

ಅಭ್ಯರ್ಥಿಯು ಬಾರ್ ಕೌನ್ಸಿಲ್'ನಲ್ಲಿ ನೋಂದಾಯಿತರಾಗಿರಬೇಕು. ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಠ 15 ವರ್ಷಗಳ ಸೇವಾ ಅನುಭವ ಹೊಂದಿರುವ ವಕೀಲರ ಬಳಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ತರಬೇತಿ ಪಡೆಯುತ್ತಿರುವ ಬಗ್ಗೆ ಲಿಖಿತ ಪ್ರಮಾಣ ಪತ್ರ ಸಲ್ಲಿಸಬೇಕು. ಈಗಾಗಲೇ ಯಾವುದೇ ಉದ್ಯೋಗದಲ್ಲಿರುವ ನೌಕರರಿಗೆ ಅವಕಾಶವಿರುವುದಿಲ್ಲ. ಅಪೂರ್ಣ ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೂಜಾರಿಯಿಂದ ದೇವರಿಗೆ ಸಿಕ್ಕೇ ಇಲ್ಲ ಸ್ವಾತಂತ್ರ್ಯಭಾರತವನ್ನು ಜಾಗತಿಕ ಮ್ಯಾನುಫ್ಯಾಕ್ಚರಿಂಗ್ ಹಬ್ ಮಾಡಲು ಕೌಶಲ್ಯಪೂರ್ಣ ಯುವಪಡೆ ಅಗತ್ಯ: ಹೆಚ್.ಡಿ. ಕುಮಾರಸ್ವಾಮಿವಿಧಾನಮಂಡಲ ಅಧಿವೇಶನ: ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಕಾರ್ಯತಂತ್ರ ಸಭೆರಾಷ್ಟ್ರಧ್ವಜ ಹಾರಿಸಲು ‘ಸಮಯವಿಲ್ಲ’ ಎಂದ ಸಚಿವ ಜಮೀರ್ ವಜಾಕ್ಕೆ ಆರ್‌ಅಶೋಕ್ ಆಗ್ರಹ: ಕಾಂಗ್ರೆಸ್ ವಿರುದ್ಧ ಆಕ್ರೋಶಅಂಡಮಾನ್ ಆಳಸಮುದ್ರದಲ್ಲಿ ಗಿನ್ನಿಸ್ ದಾಖಲೆ ಬರೆದ ಆರ್‌ಅಶೋಕ್ ಪುತ್ರ ಶರತ್: ತಂದೆಯಾಗಿ ಹೆಮ್ಮೆ ವ್ಯಕ್ತಪಡಿಸಿದ ವಿಪಕ್ಷ ನಾಯಕಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಿ: ಕಾಂಗ್ರೆಸ್ ವಿರುದ್ಧ ವಿಧಾನಸೌಧ ಆವರಣದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆರಾಷ್ಟ್ರಧ್ವಜ ಗೌರವಿಸುವುದಕ್ಕಿಂತ ಪಕ್ಷದ ಕೆಲಸ ಮುಖ್ಯವೇ?: ಸಚಿವ ಜಮೀರ್ ರಾಜೀನಾಮೆಗೆ ಆಗ್ರಹ ಸದನದ ಒಳಗೂ-ಹೊರಗೂ ಕಾಂಗ್ರೆಸ್ ವಿರುದ್ಧ ಉಗ್ರ ಹೋರಾಟ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ವಿಭಜನೆಯ ಭೀಕರತೆ ನೆನೆದು ‘ಅಖಂಡ ಭಾರತ’ದ ಸಂಕಲ್ಪ ವಚನ ನೀಡಿದ ಸಿ.ಟಿ. ರವಿ: ತಾಯ್ನಾಡಿನ ಸಾರ್ವಭೌಮತ್ವ ರಕ್ಷಣೆಗೆ ಕರೆತಂದೆ ಮಾಡಿದ ಸಾಲಕ್ಕೆ SSLC ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!