Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುದೀರ್ಘ ಸೇವಾ ಪ್ರಶಸ್ತಿಗೆ ಭಾಜನರಾದ ಸ್ಕೌಟ್ ಮಾಸ್ಟರ್ ಸುರೇಶ್‌ಬಾಬು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ದುಃಖಕರ ಸಂಗತಿ. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ನೆರೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಾಲಚಂದ್ರನಾಯ್ಕ ತಿಳಿಸಿದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಚಂದ್ರವಳ್ಳಿಯಲ್ಲಿ ಮೂರು ದಿನಗಳ ಕಾಲ ನಡೆದ ಬ್ಯಾಡ್ಜ್ ವರ್ಕ್ ತರಬೇತಿಯ ಟ್ರಕ್ಕಿಂಗ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಜೀವನದಲ್ಲಿ ಸಿಟ್ಟಿಗಿಂತ ಶಿಸ್ತು ಮುಖ್ಯ. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಿಕ್ಷಣವನ್ನು ಪಡೆದುಕೊಂಡು ಸಮಾಜದಲ್ಲಿ ಸತ್ಪ್ರೆಜೆಗಳಾಗಬೇಕು. ಮೊಬೈಲ್‌ನಿಂದ ಹದಿಹರೆಯದವರ ಭವಿಷ್ಯ ವಿನಾಶದ ಅಂಚಿಗೆ ತಲುಪುತ್ತಿರುವುದರಿಂದ ವಿದ್ಯಾರ್ಜನೆಗೆ ಅಡ್ಡಿಯಾಗುತ್ತಿದೆ. ಮಾದಕ ವ್ಯಸನ, ಮೊಬೈಲ್‌ಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಮಿತಿ ಸದಸ್ಯ ಬಸವರಾಜಪ್ಪ ಮಾತನಾಡಿ ಶಿಸ್ತಿನ ಸಂಸ್ಥೆಯಲ್ಲಿ ಸೇರ್ಪಡೆಗೊಂಡು ಶಿಕ್ಷಣ ಪಡೆಯುತ್ತಿರುವ ನೀವುಗಳು ನಿಜಕ್ಕೂ ಪುಣ್ಯವಂತರು. ವಾಸವಿ ಶಾಲೆಯ ಸ್ಕೌಟ್ ಮಾಸ್ಟರ್ ಸುರೇಶ್‌ಬಾಬು ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದು ಖುಷಿ ತಂದಿದೆ. ಇಡಿ ವಿಶ್ವವೇ ಕೋವಿಡ್‌ನಿಂದ ತಲ್ಲಣಿಸುತ್ತಿದ್ದ ಸಮಯದಲ್ಲಿ ಇವರು ಅನುಪಮ ಸೇವೆ ಸಲ್ಲಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಅವರ ಸುದೀರ್ಘ ಸೇವೆಯನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅರ್ಥಪೂರ್ಣ. ಮುಂದೆ ನೀವುಗಳು ಇದೆ ರೀತಿ ಪರೋಪಕಾರದ ಗುಣ ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಜಿಲ್ಲಾ ಸ್ಥಾನಿಕ ಆಯುಕ್ತರಾದ ಪಿ.ವೈ.ದೇವರಾಜ್‌ಪ್ರಸಾದ್, ಶಿಕ್ಷಕರಾದ ರವಿ, ವಿಶ್ವನಾಥ, ಮುರುಗೇಶ್, ಲಿಂಗರಾಜ್, ಶೇಖರ್‌ನಾಯ್ಕ, ಸ್ವಾಮಿ, ಕಾಂತರಾಜ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ