Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಉಳಿವಿಗಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕಾರಿ-ಸಿ. ಕೆ. ಬಾಬಾ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ಸ್ಕೌಟ್ ಮತ್ತು ಗೈಡ್ಸ್ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಾಗಲಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.


ದೊಡ್ಡಬಳ್ಳಾಪುರ ನಗರದ ಹೊರವಲಯದ ಅನಿಬೆಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗುತ್ತದೆ. ಅಲ್ಲದೇ ಮಕ್ಕಳಲ್ಲಿ ದೇಶಾಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸುವುದು ವಿಶೇಷ. ನಾವು ಸದಾ ಕೆಲಸಗಳ ಒತ್ತಡದಲ್ಲಿರುತ್ತೇವೆ ಆದರೆ ಇಂತಹ ಕಾರ್ಯಕ್ರಮಗಳಲ್ಲಿ ಬಂದು ಭಾಗವಹಿಸಿದರೆ ನಮ್ಮ ಮೈಂಡ್ ರೀಫ್ರೆಶ್ ಆಗುತ್ತೆ.

 ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ ನೂರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದ್ದು. ಇಂದು ನಾನು ಅತ್ಯುತ್ತಮ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂಬ ಭಾವನೆ ನನ್ನಲ್ಲಿ ಮೂಡಿದೆ. ನನ್ನ ವಿದ್ಯಾಭ್ಯಾಸದ ದಿನಗಳಲ್ಲಿ ಎನ್.ಸಿ.ಸಿ ಹಾಗೂ ಎನ್. ಎಸ್.ಎಸ್. ನಲ್ಲಿ ತರಬೇತಿ ಪಡೆದಿದ್ದೇನೆ. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ ಎಂದರು.

 ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ ನಾವು ನೀವು ಸುರಕ್ಷಿತವಾಗಿ ಇದ್ದೇವೆ ಆದರೆ ಜಮ್ಮು ಕಾಶ್ಮೀರ, ಉತ್ತರಾಂಚಲ್‌ಹೆಚ್ಚು ವಿಪತ್ತು ಸಂಭವಿಸುತ್ತದೆ.ನಮ್ಮ ರಾಜ್ಯದ ಕೋಸ್ಟಲ್‌ಏರಿಯಾಗಳಲ್ಲಿ ಆಪತ್ತು ಸಂಭವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ ಸಹಾಯದ ಅವಶ್ಯಕತೆ ಹೆಚ್ಚಿರುತ್ತದೆ.

ಇಂತಹ ತರಬೇತಿಗಳಲ್ಲಿ ಕೃಷಿ ಹೊಂಡ ಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು ನಗರ ಪ್ರದೇಶಗಳಲ್ಲಿ ಕೈಗಾರಿಕಾ ಆಪತ್ತುಗಳಿಂದ ನಾವು ಬಳಲಿದ್ದೇವೆ. ಇಂತಹ ಸಮಸ್ಯೆಗಳಿಂದ ಪಾರಾಗಲು ನಿಯತಕಲಿಕವಾಗಿ ಮಾಕ್ ಡ್ರಿಲ್ ಮಾಡಿಸುವ ಮೂಲಕ ಜನರನ್ನು ಜಾಗೃತಿ ಮೂಡಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದರು. 

ಕರ್ನಾಟಕ ರಾಜ್ಯ ಸೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಮಾತನಾಡಿ, 7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ.

ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ ಪ್ರಮುಖರಾದ ಲತಾ ಹಾಗು ಬಸವರಾಜ್ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ನಿರೀಕ್ಷಕ ಸಾಧಿಕ್ ಪಾಷಾ ರಾಜ್ಯ ಹಾಗು ಜಿಲ್ಲಾ ಪ್ರಮುಖರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ