Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಜಾಗೃತಿ ಉಪಾಧ್ಯಕ್ಷರಾಗಿ ಛಾಯಾ ಗ್ರಾಹಕ ನಾಗೇಶ್ ಆಯ್ಕೆ 

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ
  ಉಪಾಧ್ಯಕ್ಷರಾಗಿ  ಶ್ರೀಯುತ ನಾಗೇಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕಳೆದ 3ವರ್ಷಗಳಿಂದ ಜನಜಾಗೃತಿ ವೇದಿಕೆಯಲ್ಲಿ ಸದಸ್ಯರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾಗಿ ನಾಗೇಶ್ ರವರನ್ನು ಆಯ್ಕೆ ಮಾಡಲಾಗಿದೆ. ಇವರ ಸೇವೆ ನಮ್ಮ ಜಿಲ್ಲೆಯ ಜನತೆಗೆ ಮತ್ತಷ್ಟು ಸಿಗಲಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ. 

ನಾಗೇಶ್ ರವರು ದೊಡ್ಡಬಳ್ಳಾಪುರ ಫೋಟೋಗ್ರಫಿ ಮತ್ತು ವೀಡಿಯೊಗ್ರಪಿ ಸಂಘದ ರಾಜ್ಯಾಧ್ಯಕ್ಷರಾಗಿ,ಸಂಸ್ಕೃತಿ ಟ್ರಸ್ಟ್ ನಿರ್ದೇಶಕರಾಗಿ, ಬೈರವೇಶ್ವರ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸದಸ್ಯರಾಗಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಅವರ ಉತ್ತಮ ನಡವಳಿಕೆ,ನಾಯಕತ್ವದ ಗುಣ, ಕಾರ್ಯ ವೈಖರಿಯನ್ನು ಗುರುತಿಸಿ  ಜನಜಾಗೃತಿ ವೇದಿಕೆಯಲ್ಲಿ ಈ ನೂತನ ಜವಾಬ್ದಾರಿ ನೀಡಿ ಗೌರವಿಸಿರುವುದು ನಮ್ಮಲ್ಲರ ಹೆಮ್ಮೆ ಎಂದು ಸಮಿತಿಯ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಮಾತನಾಡಿರುವ ಅವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನನಗೆ ನೂತನ ಜವಾಬ್ದಾರಿಯನ್ನು ನೀಡಿದ್ದು, ಜಿಲ್ಲಾ ಹಾಗೂ ಎಲ್ಲಾ ತಾಲ್ಲೂಕು ಸಮಿತಿಗಳ ಸಲಹೆ ಸೂಚನೆ ಪಡೆದು ಮತ್ತಷ್ಟು ಉತ್ತಮ ಸೇವೆ ಸಲ್ಲಿಸಲು, ಜನಜಾಗೃತಿ ವೇದಿಕೆಯ ಘನತೆ ಯನ್ನು ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಜಿಲ್ಲೆಯ ಜನಜಾಗೃತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ರವರಿಗೆ ಜಿಲ್ಲಾನಿರ್ದೇಶಕರು,ಯೋಜನಾಧಿಕಾರಿಗಳು, ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಸಮಿತಿಯ ಪದಾಧಿಕಾರಿಗಳು ಶುಭಕೋರಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ