Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಕ್ರೀಡಾ ಶಾಲೆಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಕ್ರೀಡಾ ವಸತಿ ಶಾಲೆಗೆ ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ
2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಭಾವಂತ ಬಾಲಕ ಹಾಗೂ ಬಾಲಕಿಯರನ್ನು ಗುರುತಿಸಿ ಕ್ರೀಡಾಶಾಲೆಗೆ ಪ್ರವೇಶ ನೀಡಲಾಗುವುದು.

ಪ್ರವೇಶ ಪಡೆದ ಬಾಲಕ-ಬಾಲಕಿಯರಿಗೆ ಇಲಾಖೆಯ ವತಿಯಿಂದ ಉಚಿತವಾಗಿ ಊಟ, ವಸತಿ ಮತ್ತು ಕ್ರೀಡಾ ಪರಿಣಿತರುಗಳಿಂದ ತರಬೇತಿಯನ್ನು ನೀಡಿ ಅತ್ಯುತ್ತಮ ಕ್ರೀಡಾಪಟುಗಳನ್ನಾಗಿ ರೂಪುಗೊಳಿಸಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ರೀತಿಯಲ್ಲಿ ತರಬೇತಿಗೊಳಿಸಲಾಗುವುದು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 4ನೇ ತರಗತಿಯಲ್ಲಿ ಓದುತ್ತಿರುವ ಮತ್ತು 2026 ಜೂನ್ 1ಕ್ಕೆ 10 ವರ್ಷ ಮತ್ತು 11 ವರ್ಷ ಮೀರದ ಬಾಲಕ ಬಾಲಕಿಯರು ಆಯ್ಕೆಯಲ್ಲಿ ಭಾಗವಹಿಸಬಹುದು. ಆಯ್ಕೆಯಲ್ಲಿ ಅಭ್ಯರ್ಥಿಗಳ ದೈಹಿಕ ಸಾಮಥ್ರ್ಯ, ಶಕ್ತಿ, ಚಾಕಚಕ್ಯತೆ, ಸಹಿಷ್ಣುತೆ, ಕುಶಲತೆ, ವೇಗ ಹಾಗೂ ಆಯಾ ಕ್ರೀಡೆಗೆ ಅಗತ್ಯವಿರುವ ಎತ್ತರ ಪರೀಕ್ಷಿಸಿ ಒಟ್ಟಾರೆ ಶೇ.50 ಕ್ಕೂ ಹೆಚ್ಚು ಅಂಕಗಳನ್ನು ಪಡೆದವರಿಗೆ ಯೋಗ್ಯತಾನುಸಾರ ಆಯ್ಕೆಗೆ ಪರಿಗಣಿಸಲಾಗುವುದು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆಯ್ಕೆ ನಡೆಸಲಾಗುತ್ತಿದ್ದು, ಆಯ್ಕೆ ನಡೆಯುವ ಸ್ಥಳ, ವೇಳ ಹಾಗೂ ದಿನಾಂಕಗಳ ವಿವರ ಈ ಕೆಳಗಿನಂತಿದೆ. ಫೆ.5ರಂದು ಬೆಳಿಗ್ಗೆ 11 ರಿಂದ ಮೊಳಕಾಲ್ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜು, ಫೆ.6 ರಂದು ಬೆಳಿಗ್ಗೆ 11 ರಿಂದ ಚಳ್ಳಕೆರೆ ತಾಲ್ಲೂಕು ಕ್ರೀಡಾಂಗಣ, ಫೆ.7 ರಂದು ಬೆಳಿಗ್ಗೆ 11 ರಿಂದ ಹೊಳಲ್ಕೆರೆ ತಾಲ್ಲೂಕು ಕ್ರೀಡಾಂಗಣ, ಫೆ.9ರಂದು ಬೆಳಿಗ್ಗೆ 11 ರಿಂದ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣ, ಫೆ.10ರಂದು ಬೆಳಿಗ್ಗೆ 11 ರಿಂದ ಹಿರಿಯೂರು ತಾಲ್ಲೂಕು ಕ್ರೀಡಾಂಗಣ , ಫೆ.11ರಂದು ಬೆಳಿಗ್ಗೆ 11 ರಿಂದ ಚಿತ್ರದುರ್ಗ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ಜಿಲ್ಲಾ ಮಟ್ಟದ ಆಯ್ಕೆಯನ್ನು ಫೆ. 12 ರಿಂದ 14 ರವರೆಗೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ತಾಲ್ಲೂಕು ಕೇಂದ್ರಗಳಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದಲ್ಲಿ ಫೆ.12 ಮತ್ತು  ಫೆ.14 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯುವ ಆಯ್ಕೆ ಟ್ರಯಲ್ಸ್‍ನಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದೆ. ಆಯ್ಕೆಯಲ್ಲಿ ಭಾಗವಹಿಸುವ ಬಾಲಕ-ಬಾಲಕಿಯರಿಗೆ ಯಾವುದೇ ರೀತಿಯ ಭತ್ಯೆಯನ್ನು ಇಲಾಖೆ ವತಿಯಿಂದ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣ, ಚಿತ್ರದುರ್ಗ, ಕಛೇರಿ ದೂರವಾಣಿ ಸಂಖ್ಯೆ 08194-235635 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ