Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆ ಜಾರಿ- ಜಿಲ್ಲಾಧಿಕಾರಿ ವೆಂಕಟೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯಾದ್ಯಂತ ಸ್ವಯಂ ಚಾಲಿತ ಮ್ಯುಟೇಷನ್  ವ್ಯವಸ್ಥೆಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಗುರುವಾರದಂದು ಚಾಲನೆ ನೀಡಿದ್ದು
, ಈ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು, ತಮ್ಮ ತಮ್ಮ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮನವಿ ಮಾಡಿದ್ದಾರೆ.

     ಈ ಹಿಂದೆ ಎಲ್ಲಾ 7 ದಿನಗಳ ಹಾಗೂ 15 ದಿನಗಳ ನೋಟೀಸು ಅವಧಿ ಹೊಂದಿರುವ ಮುಟೇಶನ ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ಸಂಬಂಧಪಟ್ಟ ರಾಜಸ ನಿರೀಕ್ಷಕರು ಖುದ್ದಾಗಿ ಡಿಜಿಟಲ್ ಸಹಿ ಮೂಲಕ ಅನುಮೋದನೆ ನೀಡುವ ಅವಶ್ಯಕತೆ ಇತ್ತು. ಇದರಿಂದಾಗಿ ಮ್ಯುಟೇಶನ್ ಅನುಮೋದನೆಗೆ ಹೆಚ್ಚಿನ ಸಮಯ ತಗಲುತ್ತಿತ್ತು.  ಅನಗತ್ಯ ವಿಳಂಬವನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದಲ್ಲಿ ಸ್ವಯಂ ಚಾಲಿನ ಮ್ಯುಟೇಷನ್‍ಗೆ ಹೊಸ ಪದ್ಧತಿಯನ್ನು ಫೆ. 24 ಗುರುವಾರದಿಂದ ಜಾರಿಗೆ ತರಲಾಗಿದೆ.  ಎಲ್ಲಾ 7 ದಿನಗಳ ಹಾಗೂ 15 ದಿನಗಳ ನೋಟೀಸು ಅವಧಿ ಹೊಂದಿರುವ ಮ್ಯುಟೇಷನ್‍ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲ- ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಸರ್ವರ್ ಸಹಿ ಮೂಲಕ ಸ್ವಯಂಚಾಲಿತವಾಗಿ ಅನುಮೋದನೆಯಾಗುವಂತೆ ಭೂಮಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

      07 ಕೆಲಸದ ದಿನಗಳು ಅಥವಾ 15 ಕೆಲಸದ ದಿನಗಳ ನೋಟೀಸ್ ಅವಧಿಯೊಳಗೆ ಕಂದಾಯ ನಿರೀಕ್ಷಕರು (ಸರ್ಕಾರಿ ಆಕ್ಷೇಪ) ಅಥವಾ ಸಾರ್ವಜನಿಕರ ಯಾವುದೇ ತಕರಾರು ನೀಡಿದ್ದಲ್ಲಿ, ಈ ಮ್ಯುಟೇಷನ್ ಅನ್ನು ಪೂರ್ಣಗೊಳಿಸದ ಆರ್.ಸಿ.ಸಿ.ಎಂ.ಎಸ್ ತಂತ್ರಾಂಶದ ತಹಶೀಲ್ದಾರರ ನ್ಯಾಯಾಲಯಕ್ಕೆ ಅಂತಹ ಪ್ರಕರಣವನ್ನು ವರ್ಗಾಯಿಸಲಾಗುತ್ತದೆ. ತಹಶೀಲ್ದಾರರ ನಿರ್ಧಾರದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

     ಈ ಹಿಂದೆ ಮ್ಯುಟೇಷನ್ ಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಥವಾ ಅನುಮೋದನೆ ನೀಡಬೇಕಾದಲ್ಲಿ ರಾಜಸ್ವ ನಿರೀಕ್ಷಕರು ತಾಲ್ಲೂಕು ಕಛೇರಿಗಳಿಗೆ ಬಂದು ಸಲ್ಲಿಸಬೇಕಾಗಿತ್ತು. ಆದರೆ ಪ್ರಸ್ತುತ, ರಾಜಸ್ವ ನಿರೀಕ್ಷಕರಿಗೆ ಲಾಗಿನ್ ನೀಡಲಾಗಿದ್ದು, ಯಾವುದೇ ಸ್ಥಳದಿಂದ ಆಕ್ಷೇಪಣೆ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ ಹಾಗೂ ಅನುಮೋದನೆಯಾಗುತ್ತದೆ.

     ಭೂಮಿ ತಂತ್ರಾಂಶದಲ್ಲಿ ಸರ್ಕಾರಿ ಜಮೀನುಗಳು, ಸರ್ಕಾರಿ ನಿಬಂಧನೆ ಇರುವ ಜಮೀನುಗಳು ಹಾಗೂ ಪಿಟಿಸಿಎಲ್ ವ್ಯಾಪ್ತಿಗೆ ಬರುವ ಜಮೀನುಗಳನ್ನು ಫ್ಲಾಗ್ ಮಾಡಲಾಗಿದ್ದು, ಅಂತಹ ಜಮೀನುಗಳನ್ನು ನೋಂದಣಿ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಇಂತಹ ಜಮೀನುಗಳು ಸ್ವಯಂಚಾಲಿತ ಮ್ಯುಟೇಷನ್ ವ್ಯಾಪ್ತಿಗೆ ಬರುವುದಿಲ್ಲ.

     ಮ್ಯುಟೇಷನ್ ಪೂರ್ಣಗೊಂಡ ನಂತರ ಸಂಬಂಧಪಟ್ಟವರಿಗೆ ಎಸ್. ಎಂ. ಎಸ್. ಸಂದೇಶ ಮೂಲಕ ಮಾಹಿತಿಯನ್ನು ನೀಡಲಾಗುತ್ತಿದೆ ಮತ್ತು ಸಂಬಂಧಿಸಿದ ನೋಟೀಸುಗಳನ್ನು ಇ-ಚಾವಡಿ ಮೂಲಕ ತಂತ್ರಾಂಶದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.  ಇದರಿಂದ ಮಧ್ಯವರ್ತಿಗಳು ಜನರನ್ನು ದುರುಪಯೋಗಪಡಿಸಿಕೊಳ್ಳದಂತೆ, ನೆಮ್ಮದಿಯಿಂದ ಬದುಕಲು ಆಗುತ್ತದೆ. ಜನರಿಗೆ ಅನಗತ್ಯ ಹೊರೆ ಕಡಿಮೆ ಮಾಡಿ, ಸರ್ಕಾರಿ ಸೇವೆಗಳ ಸರಳೀಕರಣ ಮತ್ತು ಸುಲಲಿತವಾಗಿ ಜನರ ಮನೆಬಾಗಿಲಿಗೆ ಸೇವೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.  ಕಂದಾಯ ಇಲಾಖೆಯಿಂದ ರಾಜಸ್ವ ನಿರೀಕ್ಷಕರುಗಳಿಗೆ ಕ್ರೋಮ್‍ಬುಕ್‍ನ್ನು ಏಪ್ರಿಲ್‍ನಿಂದ ನೀಡಲು ವ್ಯವಸ್ಥೆ ಮಾಡಲಾಗುತ್ತಿದ್ದು ಇನ್ನು ಮುಂದೆ ಕಂದಾಯ ಇಲಾಖೆಯ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ.

     ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಮತ್ತು ತಮ್ಮ ತಮ್ಮ ಜಮೀನುಗಳ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದು ಅತ್ಯವಶ್ಯಕವಾಗಿದ್ದು, ಸಾರ್ವಜನಿಕರು ಗ್ರಾಮ ಆಡಳಿತ ಅಧಿಕಾರಿ /ರಾಜಸ್ಥ ನಿರೀಕ್ಷಕರು / ನಾಡಕಛೇರಿ/ ತಾಲ್ಲೂಕು ಕಛೇರಿಯಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ